ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22 ಯಾಂತ್ರೀಕೃತ ದೋಣಿ ವಶಕ್ಕೆ

Last Updated 8 ಫೆಬ್ರುವರಿ 2012, 8:15 IST
ಅಕ್ಷರ ಗಾತ್ರ

ಹೂವಿನಹಡಗಲಿ: ತಾಲ್ಲೂಕಿನ ಹಿರೇಬನ್ನಿಮಟ್ಟಿ ಗ್ರಾಮದ ಬಳಿ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಮಾಡುತ್ತಿದ್ದರೆನ್ನುವ ಖಚಿತ ಮಾಹಿತಿಯ ಮೇರಿಗೆ ತಹಶೀಲ್ದಾರ್ ಬಸವರಾಜ ಸೋಮಣ್ಣನವರ್ ಮತ್ತು ಗಣಿ ಮತ್ತು ಭೂ-ವಿಜ್ಞಾನ ಇಲಾಖೆಯ ಅಧಿಕಾರಿಗಳು ಪೊಲೀಸರೊಂದಿಗೆ ದಾಳಿ ನಡೆಸಿ  22 ಯಾಂತ್ರೀಕೃತ ದೋಣಿಗಳು ಮತ್ತು 3 ಹಿಟಾಚಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿ ಆಗಿದ್ದಾರೆ.

ತುಂಗಭದ್ರಾ ನದಿಯಲ್ಲಿ ಮೈಲಾರ ಜಾತ್ರೆಯ ಪ್ರಯುಕ್ತ ನೀರು ಬಿಟ್ಟ ಹಿನ್ನೆಲೆಯಲ್ಲಿ ಯಾಂತ್ರಿಕೃತ ದೋಣಿ ಗಳನ್ನು ಬಳಸಿ ಅಕ್ರಮ ಮರಳುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ.

ಇದೇ ತಿಂಗಳಲ್ಲಿ 2-3 ಬಾರಿ ಅಕ್ರಮ ಮರಳುಗಾರಿಕೆ ಮಾಡುವವರ ವಿರುದ್ಧ ದಾಳಿ ನಡೆಸಿ ಅಕ್ರಮ ಮರಳುಗಾರಿಕೆ ತಡೆಗೆ ತಹಶೀಲ್ದಾರ್ ಪ್ರಯತ್ನಿಸಿದರು ಮರಳು ದಂಧೆ ನಿರಾತಂಕವಾಗಿ ನಡೆದಿದ್ದು ಯಾಂತ್ರೀಕೃತ ದೋಣಿಗಳನ್ನು ಬಳಸಿ ಮರಳುಗಾರಿಕೆ ಮಾಡುವು ದರಿಂದ ನದಿಯಲ್ಲಿ ದೊಡ್ಡ-ದೊಡ್ಡ ಪ್ರಮಾಣದ ಗುಂಡಿಗಳಾಗಿ ಜನ ಸಾಮಾನ್ಯರಿಗೆ ತಿಳಿಯದೇ ನದಿಯಲ್ಲಿ ಪ್ರಾಣಾಪಾಯಗಳಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT