ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22ರಂದು ಬೃಹತ್ ಶ್ರದ್ಧಾಂಜಲಿ ಸಭೆ

ಯದುವಂಶದ ಅರಸರ ಕೊಡುಗೆ ಸ್ಮರಣೆ
Last Updated 19 ಡಿಸೆಂಬರ್ 2013, 6:29 IST
ಅಕ್ಷರ ಗಾತ್ರ

ಮೈಸೂರು: ಅರಮನೆ ಮುಂಭಾಗದಲ್ಲಿ ಡಿ. 22ರಂದು ಸಂಜೆ 4 ಗಂಟೆಗೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಶ್ರದ್ಧಾಂಜಲಿ ಸಭೆ ಮತ್ತು ಯದುವಂಶದ ಅರಸರ ಕೊಡುಗೆ ಸ್ಮರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

ನಗರದ ನಟರಾಜ ಕಲ್ಯಾಣ ಮಂಟಪದಲ್ಲಿ ಮಾಜಿ ಶಾಸಕ ಎಚ್‌. ಗಂಗಾಧರನ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಮಾನ ಮನಸ್ಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ  ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ. ಮಾದೇಗೌಡ ತಿಳಿಸಿದ್ದಾರೆ.

ಶ್ರದ್ಧಾಂಜಲಿ ಸಭೆ ಆಯೋಜನೆ ಕುರಿತು ಮುಖ್ಯಮಂತ್ರಿಗೆ ಮಾಹಿತಿ ತಲುಪಿಸಲಾಗಿದೆ. ಮುಖ್ಯಮಂತ್ರಿ ಬರುವಿಕೆ ಆಧರಿಸಿ ಸಭೆ ಆಯೋಜನೆ ದಿನಾಂಕ ಬದಲಾಗುವ ಸಾಧ್ಯತೆ ಇದೆ. ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳು­ವರು.

ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಆದಿಚುಂಚುನ ಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸುವರು. ಈ ಸಭೆಗೆ ಎರಡು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ವಿವರಿಸಿದರು.

ಶ್ರದ್ಧಾಂಜಲಿ  ಸಭೆಯಂದು ಅರಮನೆ ಮುಂಭಾಗದಲ್ಲಿ ಶ್ರೀಕಂಠದತ್ತ ಒಡೆಯರ್‌ ಅವರ ದೊಡ್ಡ ಭಾವಚಿತ್ರ ಇಟ್ಟು ಪೂಜೆ ನೆರವೇರಿಸಲಾಗುವುದು. ಯದುವಂಶದ 25 ಅರಸರ ಭಾವಚಿತ್ರಗಳನ್ನು ಇಟ್ಟು, ಇವರು ನಾಡಿಗೆ ನೀಡಿರುವ ಕೊಡುಗೆ­ಗಳನ್ನು ಸ್ಮರಿಸಲಾಗುವುದು. ಅರಸರ ಊರಿನ ಸಾಂಸ್ಕೃತಿಕ ಪರಂಪರೆಗೆ ಮರುಜೀವ ನೀಡುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಮುಖಂಡರು, ಮಾಜಿ ಸಚಿವ ಶಿವಣ್ಣ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರ­ಶೇಖರ್‌, ಪ್ರೊ.ನಂಜರಾಜ ಅರಸ್‌, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ, ಹೊಸಮಠದ ಚಿದಾನಂದ ಸ್ವಾಮೀಜಿ, ಬೇಬಿ ಮಠದ ತ್ರಿನೇತ್ರಮಹಾಂತ ಸ್ವಾಮೀಜಿ ಸೇರಿದಂತೆ ಸುಮಾರು 250 ಮಂದಿ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT