23ರಂದು ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

7

23ರಂದು ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

Published:
Updated:

ಬೆಂಗಳೂರು: ಬೆಂಗಳೂರು ಮಹಾಗರ ಸಾರಿಗೆ ಸಂಸ್ಥೆ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ ಸೋಮವಾರ (ಸೆ.23) ಸಂಘದ  ಸದಸ್ಯರ ಪ್ರತಿಭಾವಂತ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಬೆಳಿಗ್ಗೆ 11ಗಂಟೆಗೆ ಪುರಭವನದಲ್ಲಿ ನಡೆಯುವ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ರಫಾಯಲ್ ರಾಜ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಎಸ್ಸೆಸೆಲ್ಸಿ, ಪಿಯುಸಿ ಹಾಗೂ ಪದವಿ ಕೋರ್ಸ್‌ಗಳಲ್ಲಿ ಶೇಕಡ ೬೦ ಹಾಗೂ ಅದಕ್ಕಿಂತ ಅಧಿಕ ಅಂಕಗಳನ್ನು ಪಡೆದ ೪೦೦ ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.ಸಮಾರಂಭದ ನಂತರ ೧೪ನೇ ವಾರ್ಷಿಕ ಸರ್ವ ಸದಸ್ಯರ ಮಹಾ ಸಭೆ ನಡೆಯಲಿದ್ದು, ಕಾರ್ಯಸೂಚಿಯಲ್ಲಿನ ನಾನಾ ವಿಷಯಗಳನ್ನು ಚರ್ಚಿಸಲಾಗುವುದು ಎಂದು ವಿವರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry