23ರಂದು ಮೈಸೂರಿಗೆ ರಾಷ್ಟ್ರಪತಿ

7

23ರಂದು ಮೈಸೂರಿಗೆ ರಾಷ್ಟ್ರಪತಿ

Published:
Updated:

ಮೈಸೂರು: ನಗರದಲ್ಲಿ ನಿರ್ಮಾಣವಾಗಿ ರುವ ಜೆಎಸ್‌ಎಸ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾ ಟನೆಗೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಸೆ. 23ರಂದು ಆಗಮಿಸಲಿದ್ದಾರೆ.ಮಧ್ಯಾಹ್ನ 3 ಗಂಟೆಗೆ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌  ಅಧ್ಯಕ್ಷತೆ ವಹಿಸಲಿದ್ದಾರೆ.ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ‘ಪ್ರಸಾದ’ ವಿಶೇಷ ಸಂಚಿಕೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಎಸ್‌ಎಸ್‌ ಮಾಸಪತ್ರಿಕೆಯ ವಿಶೇಷ ಸಂಚಿಕೆಯನ್ನು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿಗಳ ಸಚಿವ ಆಸ್ಕರ್‌ ಫರ್ನಾಂಡಿಸ್‌ ಬಿಡುಗಡೆ ಮಾಡಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry