ಸೋಮವಾರ, ಜನವರಿ 20, 2020
29 °C
ಮಡಿಕೇರಿ ನಗರಸಭೆ ಚುನಾವಣೆ

23 ಎಸ್‌ಪಿ ಅಭ್ಯರ್ಥಿಗಳು ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಡಿ. 22ರಂದು ನಡೆಯಲಿರುವ ನಗರಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು 23 ವಾರ್ಡ್‌ಗಳಲ್ಲಿ ಸ್ಪರ್ಧಿಸಲಿದ್ದು, ಸದ್ಯ 18 ಜನರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಗೂಳಿಹಟ್ಟಿ ಡಿ. ಶೇಖರ್‌ ತಿಳಿಸಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಚುನಾವಣೆ ಗೆಲ್ಲುವುದು ಪಕ್ಷಕ್ಕೆ ಪ್ರತಿಷ್ಠೆಯ ವಿಷಯವಾಗಿದ್ದು, ರಾಜ್ಯ ನಾಯಕರ ನೇತೃತ್ವದಲ್ಲಿ ಚುನಾವಣೆ ಗೆಲ್ಲಲು ಕಾರ್ಯತಂತ್ರ ರೂಪಿಸಲಾಗುವುದು. ಮುಂದಿನ ದಿನಗಳಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.ಪಕ್ಷದ ಜಿಲ್ಲಾ ಮಟ್ಟದ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಮಡಿಕೇರಿ ನಗರ ಅಧ್ಯಕ್ಷರಾಗಿ ಖಲೀಲ್‌, ಉಪಾಧ್ಯಕ್ಷರಾಗಿ ಎಂ.ಎಂ. ಹನೀಫ್‌, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ವೇಣುಕುಮಾರ್‌, ಎಸ್‌ಸಿ ಮತ್ತು ಎಸ್‌ಟಿ ಘಟಕದ ಅಧ್ಯಕ್ಷರಾಗಿ ರಮೇಶ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.ಪಶ್ಚಿಮ ಘಟ್ಟ ಪ್ರದೇಶಗಳ ಸಂರಕ್ಷಣೆಯ ಹೆಸರಿನಲ್ಲಿ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಕಸ್ತೂರಿ ರಂಗನ್‌ ವರದಿಯ ಅನುಷ್ಠಾನದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ  ಕೃಷ್ಣರಾಜು, ಯುವ ಘಟಕದ ಅಧ್ಯಕ್ಷ ದಿಲೀಪ್‌ ಕುಮಾರ್‌ ಇದ್ದರು.

ಪ್ರತಿಕ್ರಿಯಿಸಿ (+)