24 ಗಂಟೆಗಳಲ್ಲಿ ಭಾರಿ ಮಳೆ

7

24 ಗಂಟೆಗಳಲ್ಲಿ ಭಾರಿ ಮಳೆ

Published:
Updated:

ಚೆನ್ನೈ (ಪಿಟಿಐ): ತಮಿಳುನಾಡಿನಲ್ಲಿ ಈಶಾನ್ಯ ಮಾರುತ ಇನ್ನೂ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೇರಳ, ಲಕ್ಷದೀಪ, ತಮಿಳುನಾಡು, ಪುದುಚೇರಿ, ದಕ್ಷಿಣ ಒಳನಾಡಿನ ಹಲವು ಭಾಗ, ಕರ್ನಾಟಕದ ಕರಾವಳಿ ಮತ್ತು ಆಂಧ್ರದ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದೂ ಇಲಾಖೆ ಹೇಳಿದೆ.ಕರ್ನಾಟಕದ ಉತ್ತರ ಒಳನಾಡು ಮತ್ತು ಆಂಧ್ರದ ತೆಲಂಗಾಣ ಭಾಗದಲ್ಲೂ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry