ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24 ಗ್ರಾಮಗಳಲ್ಲಿ ನೈರ್ಮಲ್ಯ ಆಂದೋಲನ

Last Updated 8 ಫೆಬ್ರುವರಿ 2012, 9:10 IST
ಅಕ್ಷರ ಗಾತ್ರ

ಬಾಗಲಕೋಟೆ: ಸಂಪೂರ್ಣ ನೈರ್ಮಲ್ಯ ಆಂದೋಲನ ಕಾರ್ಯಕ್ರಮದಡಿ  ಘನ ತ್ಯಾಜ್ಯ ವಸ್ತುಗಳ ನಿರ್ವಹಣೆಗಾಗಿ ಜಿಲ್ಲೆಯ 24 ಗ್ರಾಮ ಪಂಚಾಯಿತಿ ಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕವಿತಾ ದಡ್ಡೇನವರ ಹೇಳಿದರು.

ನವನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಏರ್ಪ ಡಿಸಿದ್ದ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಕುರಿತ ಒಂದು ದಿನದ ಕಾರ್ಯಾಗಾರ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹುನಗುಂದ ತಾಲ್ಲೂಕಿನ ಅಮೀನಗಡ, ಗೂಡುರ ಎಸ್.ಸಿ., ಕಮತಗಿ, ಸೂಳೀಭಾವಿ.  ಬಾಗಲಕೋಟೆ ತಾಲ್ಲೂಕಿನ ಕಲಾದಗಿ, ಶಿರೂರ, ಜಮಖಂಡಿ ತಾಲ್ಲೂಕಿನ ಆಲಗೂರ, ಚಿಮ್ಮಡ, ಹಿಪ್ಪರಗಿ, ಹುನ್ನೂರ, ಕುಲಹಳ್ಳಿ, ಸಾಸಲಟ್ಟಿ, ಸಾವಳಗಿ, ತುಂಗಳ, ಕಡಪಟ್ಟಿ ಗ್ರಾ.ಪಂ. ಆಯ್ಕೆಯಾಗಿವೆ ಎಂದರು.

 ಮುಧೋಳ ತಾಲ್ಲೂಕಿನ ಬೆಳಗಲಿ, ಲೋಕಾಪುರ ಮುಗಳಖೋಡ, ಸೈದಾಪುರ, ಶಿರೋಳ, ಬೀಳಗಿ ತಾಲ್ಲೂಕಿನ ಗಲಗಲಿ ಹಾಗೂ ಬಾದಾಮಿ ತಾಲ್ಲೂಕಿನ ಜಾಲಿಹಾಳ, ಬೇಲೂರ ಮತ್ತು ಕೋಟೆಕಲ್ಲ ಆಯ್ಕೆ ಮಾಡ ಲಾಗಿದೆ ಎಂದು ತಿಳಿಸಿದರು.

ಘನತ್ಯಾಜ್ಯ ವಿಲೇವಾರಿ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮೂಡಿ ಸುವುದು ಅಗತ್ಯವಿದ್ದು, ಗ್ರಾಮೀಣ ಪ್ರದೇಶದಲ್ಲಿ ನೈರ್ಮಲೀಕರಣಕ್ಕೆ ಒತ್ತು ನೀಡುವ ಮೂಲಕ ಜನರ ಆರೋಗ್ಯ ಸುಧಾರಿಸಬೇಕಾಗಿದೆ ಎಂದು ಹೇಳಿದರು.

ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ವೀಣಾ ಎಮ್ಮಿ  ಮಾತನಾಡಿ,  ಪ್ಲಾಸ್ಟಿಕ್ ಬಳಕೆ ಮಾಡುವುದು ಹಾಗೂ ತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವಿಂಗಡಿಸಿ ಮಾರುವುದನ್ನು ಅಭ್ಯಾಸಮಾಡಿಕೊಳ್ಳ ಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ತಿಳಿವಳಿಕೆ ನೀಡಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿ ಕಾರಿ ವಿಜಯಕುಮಾರ ಕಡಕಬಾವಿ,  ಜನಸಂಖ್ಯೆ ಹೆಚ್ಚಳ, ನಗರಗಳ ಬೆಳವಣಿಗೆ, ಕೈಗಾರೀಕರಣದಿಂದ ಪರಿಸರ ಮಾಲಿನ್ಯ ಅಧಿಕವಾಗುತ್ತಿದೆ ಎಂದು ಹೇಳಿದರು.

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತ್ಯಾಜ್ಯಗಳ ವಿಂಗಡಣೆ ಮತ್ತು ಪುನರ್ ಬಳಕೆಯನ್ನು ಸಮರ್ಪಕ ವಾಗಿ ನಿರ್ವಹಿಸಿದರೆ ಲಾಭದಾಯಕ ವಾಗುತ್ತದೆ ಎಂದರು.

ಉಪನ್ಯಾಸ ನೀಡಿದ ನಗರಾಭಿವೃರ್ದಧಿ ಕೋಶದ ಯೋಜನಾ ಧಿಕಾರಿ ಎಸ್.ಬಿ.ಕಟ್ಟಿಮನಿ, ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಧಿಕಾರಿಗಳು ತ್ಯಾಜ್ಯ ವಿಲೇವಾರಿಯನ್ನು ವೈಯಕ್ತಿಕ ಜವಾಬ್ದಾರಿ ಎಂದು ಪರಿಗಣಿಸಿದಾಗ ಮಾತ್ರ ಯಶಸ್ವಿಯಾಗಬಲ್ಲರು ಎಂದು ಹೇಳಿದರು.

ಘನತ್ಯಾಜ್ಯ ವಿಲೇವಾರಿಗೆ ಬೇಕಾ ಗಿರುವ ಸಲಕರಣೆ, ಅಗತ್ಯ ವಾಹನ ಸೌಲಭ್ಯ ಪೂರೈಕೆ ಮಾಡಬೇಕು ಎಂದು ತಿಳಿಸಿದ ಅವರು ಬಾಗಲಕೋಟೆಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಜಿ. ಪಾಟೀಲ, ಡಿ.ಆರ್.ಡಿ.ಎ ಯೋಜನಾ ನಿರ್ದೇಶಕ ಎಸ್.ಕೆ.ತೊರವಿ ಉಪಸ್ಥಿತ ರಿದ್ದರು. ಉಪಕಾರ್ಯದರ್ಶಿ ವಿ.ಎಸ್. ಹಿರೇಮಠ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. 

ಬಾಗಲಕೋಟೆ ಜಿಲ್ಲೆಯ 6 ತಾಲ್ಲೂಕುಗಳ ಆಯ್ದ 24 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT