ಶನಿವಾರ, ಏಪ್ರಿಲ್ 17, 2021
30 °C

25ಕ್ಕೆ ಶಾಸಕರ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ಸಮಾಜ ಕಲ್ಯಾಣ ಸಚಿವ ಎ. ನಾರಾಯಣ ಸ್ವಾಮಿ ಅವರನ್ನು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ತಿಪ್ಪೇಸ್ವಾಮಿ ಅವರ ವಿರುದ್ಧ ಆ. 25ರಂದು ಮಾದಿಗ ಸಮುದಾಯ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.ತಾಲ್ಲೂಕು ಪತ್ರಕರ್ತರ ಸಂಘದಿಂದ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಆಗಮಿಸಿದ ವೇಳೆ ಶಾಸಕರು, ಸಚಿವರನ್ನು ನಿಂದಿಸಿದ್ದರು ಎಂದು ಮುಖಂಡ ಎಂ. ಶಿವಮೂರ್ತಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕರು ಇಡೀ ಪರಿಶಿಷ್ಟ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ, ಶಾಸಕರ ನಿಂದನೆ ಖಂಡಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಇದು ಯಾವುದೇ ಜಾತಿಯ ವಿರುದ್ಧದ ಪ್ರತಿಭಟನೆ ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.ಶಾಸಕರು ಈ ಕೂಡಲೇ ಸಮುದಾಯದ ಕ್ಷಮೆ ಕೇಳಬೇಕು. ಇಲ್ಲವಾದರೆ,  ರಾಜ್ಯದಾದ್ಯಂತ ಮತ್ತು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.ಸೂರನಹಳ್ಳಿ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿಯ ಸಂಚಾಲಕ ವಿಜಯ್‌ಕುಮಾರ್, ಮುಖಂಡರಾದ ಮಾರಣ್ಣ, ಆರ್.ಡಿ. ಮಂಜುನಾಥ್, ಸಿ.ಜೆ. ಜಯಕುಮಾರ್, ಮೊರಾರ್ಜಿ, ರುದ್ರಮುನಿ, ನಾಗರಾಜ್, ದೊಡ್ಡೇರಿ ಮಲ್ಲಿಕಾರ್ಜುನ, ಪಾಪಣ್ಣ, ಬೆಳಗೆರೆ ರಮೇಶ್, ಶ್ರೀನಿವಾಸ ಮೂರ್ತಿ, ಹೊನ್ನೂರಸ್ವಾಮಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.