25ರಿಂದ ಗ್ರಾ.ಪಂ. ಸದಸ್ಯರುಗಳ ಸಭೆ

7

25ರಿಂದ ಗ್ರಾ.ಪಂ. ಸದಸ್ಯರುಗಳ ಸಭೆ

Published:
Updated:

ರಾಮನಗರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗೆ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಸಂಬಂಧವಾಗಿ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯನ್ನು ಕರೆಯಲಾಗಿದೆ.ಮಾಗಡಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ಸದಸ್ಯರುಗಳ ಸಭೆಯನ್ನು ಅ.25 ರಂದು ಬೆಳಿಗ್ಗೆ 11 ಗಂಟೆಗೆ ಮಾಗಡಿ ಪಟ್ಟಣದ ಬಾಲಾಜಿ ಚಿತ್ರಮಂದಿರದಲ್ಲಿ ಕರೆಯಲಾಗಿದೆ.ಅ.27 ರಂದು ಬೆಳಿಗ್ಗೆ 11 ಗಂಟೆಗೆ ರಾಮನಗರದ ಶ್ರೀರಾಮ ಚಿತ್ರಮಂದಿರದಲ್ಲಿ ರಾಮನಗರ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರುಗಳ ಸಭೆ ಕರೆಯಲಾಗಿದೆ. ಅ.30 ರಂದು ಬೆಳಿಗ್ಗೆ 11 ಗಂಟೆಗೆ ಚನ್ನಪಟ್ಟಣದ ಶಿವಾನಂದ ಚಿತ್ರಮಂದಿರದಲ್ಲಿ ಚನ್ನಪಟ್ಟಣ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಸಭೆ ಹಾಗೂ ಅ.31 ರಂದು ಬೆಳಿಗ್ಗೆ 11 ಗಂಟೆಗೆ ಕನಕಪುರ ವಾಣಿ ಚಿತ್ರಮಂದಿರದಲ್ಲಿ ಕನಕಪುರ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಸಭೆ ಕರೆಯಲಾಗಿದೆ.ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿ ಸದಸ್ಯರು ತಮಗೆ ನಿಗದಿಪಡಿಸಿರುವ ದಿನದಂದು ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry