ಭಾನುವಾರ, ಏಪ್ರಿಲ್ 11, 2021
22 °C

25 ದಿನಗಳ ಬಳಿಕ ಪಿಂಕಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಪಿಟಿಐ): ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಅಥ್ಲೀಟ್ ಪಿಂಕಿ ಪ್ರಾಮಾಣಿಕ್ ಅವರಿಗೆ 25 ದಿನಗಳ ಬಳಿಕ ಜಾಮೀನು ಲಭಿಸಿದೆ.`ಪಿಂಕಿ ಪುರುಷನಾಗಿದ್ದು ಆತ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ~ ಎಂದು ಮಹಿಳೆಯೊಬ್ಬರು ನೀಡಿದ್ದ ದೂರಿನ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಪಿಂಕಿ ಅವರನ್ನು ಜೂನ್ 14ರಂದು ಬಂಧಿಸಿದ್ದರು. 25 ದಿನಗಳಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಉತ್ತರ 24 ಪರಗಣ ಜಿಲ್ಲೆಯ ನ್ಯಾಯಾಲಯವು ಈ ಜಾಮೀನು ನೀಡಿದೆ. ಈಗಾಗಲೇ ಅವರನ್ನು ಲಿಂಗ ನಿರ್ಣಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ವರದಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.