ಬುಧವಾರ, ಜೂನ್ 16, 2021
28 °C

25,334 ಫಲಾನುಭವಿಗಳಿಗೆ ಸೌಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

25,334 ಫಲಾನುಭವಿಗಳಿಗೆ ಸೌಲಭ್ಯ

 ಮೈಸೂರು: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಶನಿವಾರ ಇಲ್ಲಿ ನಡೆದ `ಸರ್ಕಾರಿ ಸವಲತ್ತುಗಳ ಸಂತೆ~ ಕಾರ್ಯಕ್ರಮದಲ್ಲಿ   ಮೈಸೂರು ಜಿಲ್ಲೆಯ ಏಳುಬ ತಾಲ್ಲೂಕುಗಳ 25,334 ಫಲಾನುಭವಿಗಳಿಗೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸವಲತ್ತುಗಳನ್ನು ವಿತರಿಸಿದರು.ಮಹಾರಾಜ ಕಾಲೇಜು ಮೈದಾನದಲ್ಲಿ  ಸಮಾರಂಭ ನಡೆಯಿತು. ಜಿಲ್ಲೆಯ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಒಟ್ಟು 80 ಸಾವಿರ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 12.56 ಕೋಟಿ ರೂಪಾಯಿ ವೆಚ್ಚದಲ್ಲಿ 10 ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.  ಒಟ್ಟು 71.49 ಕೋಟಿ ರೂಪಾಯಿ ಮೊತ್ತದ 35 ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.ಇದೇ ಸಂದರ್ಭದಲ್ಲಿ ವಿಜಯನಗರ ಮೊದಲ ಹಂತದಲ್ಲಿರುವ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, ಆಟೋನಗರ ಯೋಜನೆ, ಡಾ. ಬಿ.ಆರ್ ಅಂಬೇಡ್ಕರ್ ಭವನ, ಬಾಬು ಜಗಜೀವನ ರಾಮ್ ಭವನ ಮತ್ತು ಮಹರ್ಷಿ ವಾಲ್ಮೀಕಿ ಭವನಗಳಿಗೆ ಶಿಲಾನ್ಯಾಸ ನೆರವೇರಿಸಿದರು.ಇದರೊಂದಿಗೆ ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆಯಲ್ಲಿ ಕಾರ್ಯ ನಿರ್ವಹಿಸಿದ್ದ ವಿಶೇಷ ಕಾರ್ಯಪಡೆಯ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮುಡಾ ನಿವೇಶನಗಳ ಮಂಜೂರಿ ಪತ್ರಗಳನ್ನೂ ನೀಡಲಾಯಿತು. ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೇಬಲ್ ಸಿಬ್ಬಂದಿಗೆ 267 ನಿವೇಶನಗಳು ಮತ್ತು ಡಿವೈಎಸ್‌ಪಿ ಮತ್ತು ಮೇಲ್ಪಟ್ಟ ಸಿಬ್ಬಂದಿಗೆ ನಾಲ್ಕು ನಿವೇಶನಗಳನ್ನು ಮಂಜೂರು ಮಾಡಲಾಗಿದೆ.ಸುಮಾರು 23 ಇಲಾಖೆಗಳ ಪ್ರದರ್ಶನ ಮಳಿಗೆಗಳನ್ನೂ ಇಲ್ಲಿ ಆರಂಭಿಸಲಾಗಿತ್ತು. ಜೊತೆಗೆ ವಿವಿಧೆಡೆಗಳಿಂದ ಫಲಾನುಭವಿಗಳ ಉಚಿತ ಆರೋಗ್ಯ ತಪಾಸಣೆಯನ್ನೂ ನಡೆಸಲಾಯಿತು.

ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ, ಜಯದೇವ ಹೃದ್ರೋಗ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರು ಆಗಮಿಸಿದ್ದರು. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.