26ರಂದು ಅರಮನೆ ಮೈದಾನದಲ್ಲಿ ಬಂಗಾರಪ್ಪ ಹುಟ್ಟುಹಬ್ಬ ಆಚರಣೆ

7

26ರಂದು ಅರಮನೆ ಮೈದಾನದಲ್ಲಿ ಬಂಗಾರಪ್ಪ ಹುಟ್ಟುಹಬ್ಬ ಆಚರಣೆ

Published:
Updated:

ಬೆಂಗಳೂರು: ಬಂಗಾರಪ್ಪ ವಿಚಾರ ವೇದಿಕೆಯು ಹಿಂದುಳಿದ ವರ್ಗಗಳ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ 80 ನೇ ಹುಟ್ಟುಹಬ್ಬವನ್ನು ನಗರದ ಅರಮನೆ ಮೈದಾನದಲ್ಲಿ ಅ. 26 ರಂದು ಆಚರಿಸಲಿದೆ.ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಗೌರವಾಧ್ಯಕ್ಷ ಚಂದ್ರಶೇಖರ ಕಂಬಾರ ಅವರು, `ಬಂಗಾರಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿಕೊಳ್ಳುವ ಹಾಗೂ ಅವರು ಮಾಡಿದ ಉದಾತ್ತ ಕಾರ್ಯಗಳನ್ನು ಪ್ರಚಾರಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ~ ಎಂದರು.`ಬಂಗಾರಪ್ಪನವರ ಜನ್ಮ ದಿನಾಚರಣೆಯು ಪಕ್ಷಾತೀತವಾಗಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಉದ್ಘಾಟನೆ ಮಾಡಲಿದ್ದು, ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ರೈಲ್ವೆ ಸಚಿವ ಕೆ.ಮುನಿಯಪ್ಪ  ಭಾಗವಹಿಸಲಿದ್ದಾರೆ~ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry