26ರಿಂದ ರಾಷ್ಟ್ರೀಯ ಶೈಕ್ಷಣಿಕ ಸಮಾವೇಶ

7

26ರಿಂದ ರಾಷ್ಟ್ರೀಯ ಶೈಕ್ಷಣಿಕ ಸಮಾವೇಶ

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಇದೇ 26ರಿಂದ ನಗರ ಹೊರವಲಯದ ಮಾಗಡಿ ರಸ್ತೆಯಲ್ಲಿರುವ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ 3 ದಿನಗಳ ರಾಷ್ಟ್ರೀಯ ಶೈಕ್ಷಣಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಕೆ. ಬಾಲಕೃಷ್ಣ ಭಟ್ ತಿಳಿಸಿದರು.ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಣಿಕ ಮಹಾಸಂಘದ 5ನೇ ರಾಷ್ಟ್ರೀಯ ಅಧಿವೇಶನದ ಅಂಗವಾಗಿ ಸಮಾವೇಶ ನಡೆಯಲಿದ್ದು, ಸಿ.ಎಂ ಜಗದೀಶ ಶೆಟ್ಟರ್ ಉದ್ಘಾಟಿಸಲಿದ್ದಾರೆ. ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು `ಶಿಕ್ಷಕ ಸಮಾಚಾರ~ ಮಾಸಿಕದ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ 300 ಶಿಕ್ಷಕರನ್ನು ಆಹ್ವಾನಿಸಲಾಗಿದೆ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry