ಶುಕ್ರವಾರ, ಮೇ 7, 2021
27 °C
ನಟಿ ಜಿಯಾ ಖಾನ್ ಆತ್ಮಹತ್ಯೆ

27ರವರೆಗೆ ಪಂಚೋಲಿ ನ್ಯಾಯಾಂಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಐಎಎನ್‌ಎಸ್): ಬಾಲಿವುಡ್ ನಟಿ ಜಿಯಾ ಖಾನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ಆದಿತ್ಯ ಪಂಚೋಲಿ ಅವರ ಪುತ್ರ ಸೂರಜ್ ಪಂಚೋಲಿಯನ್ನು ಜೂನ್ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ಕೋರ್ಟ್ ಗುರುವಾರ ಆದೇಶಿಸಿದೆ.ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಶುಕ್ರವಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದೆ ಎಂದು  ಸೂರಜ್ ಪರ ವಕೀಲರು ತಿಳಿಸಿದರು.22 ವರ್ಷದ ಸೂರಜ್ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಗುರುವಾರ ಮುಗಿದ ಕಾರಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸೂರಜ್ ಅವರನ್ನು ಸೋಮವಾರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.ಜಿಯಾ ಖಾನ್ ಆತ್ಮಹತ್ಯೆ ಸಂಬಂಧ ಆರೋಪಿ ಸೂರಜ್ ಅವರಿಂದ ಇನ್ನಷ್ಟು ಮಾಹಿತಿ ಪಡೆಯಬೇಕಾಗಿರುವುದರಿಂದ ವಿಚಾರಣೆಗೆ ಮತ್ತಷ್ಟು ಕಾಲಾವಕಾಶ ನೀಡಬೇಕೆಂದು ಸರ್ಕಾರಿ ವಕೀಲರು ಕೋರಿದರು. ಜಿಯಾ ಖಾನ್ ಕಳಿಸಿದ್ದ ಎಂಎಸ್‌ಎಸ್, ಎಂಎಂಎಸ್ ಸಂದೇಶಗಳನ್ನು ಸೂರಜ್ ತನ್ನ ಮೊಬೈಲ್‌ನಿಂದ ತೆಗೆದು ಹಾಕಿದ್ದಾರೆ ಎಂದು ವಕೀಲರು ಆರೋಪಿಸಿದರು.ಜೂನ್ 3ರಂದು ಜಿಯಾ  ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವುದಕ್ಕೂ ಮುನ್ನ ಬರೆದಿಟ್ಟಿದ್ದ ಆರು ಪುಟಗಳ ಪತ್ರದಲ್ಲಿ ಸೂರಜ್ ಪಂಚೋಲಿ ಹೆಸರನ್ನು ಹೆಸರಿಸಿದ್ದರು. ಜಿಯಾ ಕುಟುಂಬ ಈ ಪತ್ರವನ್ನು ಪೊಲೀಸರಿಗೆ ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಸೂರಜ್‌ನನ್ನು ಬಂಧಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.