ಮಂಗಳವಾರ, ಮೇ 11, 2021
28 °C

27ರಿಂದ ಸಾರಿಗೆ ನೌಕರರ ಮುಷ್ಕರ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನೌಕರರ ಸಮಸ್ಯೆ ಪರಿಹರಿ ಸಲು ಸಾರಿಗೆ ಸಂಸ್ಥೆ ಒಪ್ಪಿಕೊಂಡಿರುವ ಹಿನೆಲೆಯಲ್ಲಿ ಏಪ್ರಿಲ್ 27 ರಿಂದ ನಡೆಸಲು ಉದ್ದೇಶಿಸಿದ್ದ ಸಾರಿಗೆ ನೌಕರರ ಮುಷ್ಕರ ಕೈಬಿಡಲಾಗಿದೆ ಎಂದು ಕಾರ್ಮಿಕ ಮುಖಂಡ ಎಚ್.ಆರ್. ಶೇಷಾದ್ರಿ ತಿಳಿಸಿದ್ದಾರೆ.ಕಾರ್ಮಿಕ ಮುಖಂಡರು ಮತ್ತು ಸಾರಿಗೆ ಸಂಸ್ಥೆ ಅಧಿಕಾರಿಗಳ ನಡುವೆ ನಡೆದ ಮಾತುಕತೆ ಫಲಪ್ರದವಾಗಿದೆ ಎಂದು ಅವರು ತಿಳಿಸಿದ್ದಾರೆ.ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಗಳ ಜಂಟಿ ಸಮಿತಿಯು ಮುಷ್ಕರ ಮಾಡು ತ್ತಿರುವುದು ಕಾನೂನುಬಾಹಿರ ಎಂದು ಅರಿತಿರುವ ಉದ್ಯೋಗಿಗಳು ಅಂದು ಕಾರ್ಯನಿರ್ವಹಿಸಲಿದ್ದಾರೆ.ಇದರಿಂದ ಸಾರಿಗೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಮೈಸೂರು ನಗರ ಮತ್ತು ಗ್ರಾಮಾಂತರ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿ ಕಾರಿ ಎಂ.ಎನ್. ಶ್ರೀನಿವಾಸ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಾರ್ವಜನಿಕರ ಓಡಾಟಕ್ಕೆ ಯಾವುದೇ ತೊಂದರೆ ಯಾಗದಂತೆ ನೋಡಿಕೊಳ್ಳಲು ಸಂಸ್ಥೆ ಬದ್ಧವಾಗಿದೆ.ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗಗ ಸಾರಿಗೆಯಲ್ಲಿ ಯಾವುದೇ ತೊಂದರೆ ಇಲ್ಲ. ಆದ್ದರಿಂದ ಪ್ರಯಾಣಿಕರು ಎಂದಿನಂತೆ ಸಾರಿಗೆಯನ್ನು ಬಳಸಬಹುದು~ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಭಾಗೀಯ ಅಧಿಕಾರಿ ಚಂದ್ರಶೇಖರ್ ಹಾಜರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.