ಭಾನುವಾರ, ಏಪ್ರಿಲ್ 11, 2021
31 °C

28ಕ್ಕೆ ರೈತರ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ರೈತ ಸಂಘದ ಮುಂದಿನ ಚಳವಳಿಯ ರೂಪು-ರೇಷೆ ಕುರಿತು ಚರ್ಚಿಸಲು ಇದೇ 21ರಂದು ಧಾರವಾಡದಲ್ಲಿ ರಾಜ್ಯ ಮಟ್ಟದ ರೈತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲಿಪಾಟೀಲ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಕಡಪಾ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪರ್ಯಾಯ ವ್ಯವಸಾಯ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಯಾವ ಮಾದರಿಯಲ್ಲಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು. ಅಲ್ಲದೇ ರಾಜ್ಯದ ನಾಲ್ಕು ವಿಭಾಗಳಲ್ಲಿ ರೈತರಿಗೆ ಅಧ್ಯಯನ ಶಿಬಿರ ಏರ್ಪಡಿಸಲಾಗುವುದು. ಶಿಬಿರದಲ್ಲಿ ಕೃಷಿ ಪರಿಣತರು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.ಬರಗಾಲ ಮತ್ತು ಪ್ರವಾಹಕ್ಕೆ ತುತ್ತಾದ ರೈತರಿಗೆ ಉಚಿತ ಬಿತ್ತನೆ ಬೀಜ ಹಾಗೂ ಶೇ 50ರ ರಿಯಾಯಿತಿ ದರದಲ್ಲಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.