ಶನಿವಾರ, ಮೇ 8, 2021
20 °C

28ಕ್ಕೆ ವಿಶ್ವ ಪಶು ವೈದ್ಯಕೀಯ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ವಿಶ್ವ ಪಶುವೈದ್ಯಕೀಯ ದಿನಾಚರಣೆ ಅಂಗವಾಗಿ ಜಿಲ್ಲಾ ಪಶು ವೈದ್ಯಕೀಯ ಸಂಘವು ಏ. 28ರಂದು ನಗರದ ರವೀಂದ್ರ ಕಲಾನಿಕೇತನದಲ್ಲಿ ವಿಶ್ವ ಪಶುವೈದ್ಯಕೀಯ ದಿನಾಚರಣೆ ಹಮ್ಮಿಕೊಂಡಿದೆ ಎಂದು ಸಂಘದ ಅಧ್ಯಕ್ಷ ಡಾ.ವೈ.ಜಿ.ಕಾಂತರಾಜು ಬುಧವಾರ ತಿಳಿಸಿದರು.ಪಶು ವೈದ್ಯರಲ್ಲಿ ತಾಂತ್ರಿಕ ಕೌಶಲ ಹೆಚ್ಚಿಸಲು ತಾಂತ್ರಿಕ ವಿಚಾರ ಸಂಕೀರ್ಣ ಏರ್ಪಡಿಸಲಾಗಿದೆ. ರೈತರಿಗೆ ಉಪಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.ಬೆಂಗಳೂರು ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ವಿಜ್ಞಾನಿ ಡಾ.ಅಮಿತ ರೀಮಗೋಮ್ಸ ಅವರಿಂದ ತಾಂತ್ರಿಕ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಏ. 26ರಂದು ಗುಬ್ಬಿ ಪಟ್ಟಣದಲ್ಲಿ ರೈತರಿಗೆ ಪಶುಪಾಲನೆ ಕುರಿತು ವಿಶೇಷ ತರಬೇತಿ, ಏ. 27ರಂದು ತಿಪಟೂರು ತಾಲ್ಲೂಕಿನ ಬಿಳಿಗೆರೆ ಗ್ರಾಮದಲ್ಲಿ ತರಬೇತಿ, ಏ. 30ರಂದು ಚಿಕ್ಕನಾಯಕನಹಳ್ಳಿ ತಾಲ್ಲೂಕು ದಸೂಡಿ ಗ್ರಾಮದಲ್ಲಿ ಪಶು ಚಿಕಿತ್ಸಾ ಶಿಬಿರ, ಮೇ 4 ಮತ್ತು 5ರಂದು ತುರುವೇಕೆ ತಾಲ್ಲೂಕು ಹುಲ್ಲೇಕೆರೆ, ಮಧುಗಿರಿ ತಾಲ್ಲೂಕು ಐ.ಡಿ.ಹಳ್ಳಿಯಲ್ಲಿ ಪಶು ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಶಾಖೆ ಜಂಟಿ ನಿರ್ದೇಶಕ ಡಾ.ದಿವಾಕರ್, ಖಜಾಂಚಿ ಡಾ.ಬಿ.ಆರ್.ನಂಜೇಗೌಡ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.