ಬುಧವಾರ, ಮೇ 12, 2021
27 °C

28ರಂದು ರಥಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: `ಸ್ವಾಮಿ ವಿವೇಕಾನಂದ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಅವರ ವಿಚಾರಧಾರೆಯ ಬಗ್ಗೆ ಜಾಗೃತಿ ಮೂಡಿಸಲು ರಥಯಾತ್ರೆ ಆಯೋಜಿಸಲಾಗಿದ್ದು, ರಥವು ಇದೇ 28ರಂದು ನೆಲಮಂಗಲಕ್ಕೆ ಆಗಮಿಸಲಿದೆ' ಎಂದು ಬಸವಣ್ಣ ದೇವರ ಮಠದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.ಪಟ್ಟಣದ ಪವಾಡ ಬಸವಣ್ಣ ದೇವರಮಠದಲ್ಲಿ ಗುರುವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತುಮಕೂರು ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ, `ಯಾವುದೇ ರೀತಿಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು' ಎಂದರು. ಸಂಚಾಲಕ ಎಚ್.ಬಿ.ಪ್ರಕಾಶ್, ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಎನ್.ರಾಮ್, ಸಿದ್ದರಾಮು, ಮುನಿರಾಮಯ್ಯ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.