ಗುರುವಾರ , ಜೂನ್ 17, 2021
22 °C

28 ಕ್ಷೇತ್ರಗಳಲ್ಲಿ ಆರ್‌ಪಿಐ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ರಿಪಬ್ಲಿಕನ್‌ ಪಕ್ಷ ರಾಜ್ಯದ 16 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.ಸೋಮವಾರ ನಡೆದ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಹೊಂದಾಣಿಕೆ ಮಾಡಿಕೊಳ್ಳಲು ಇತರೆ ಪ್ರಾದೇಶಿಕ ಪಕ್ಷಗಳೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿದೆ. ಇದರಿಂದಾಗಿ 28 ಕ್ಷೇತ್ರಗಳಲ್ಲೂ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟ­ಪಡಿಸಿದರು.

ಆಮ್‌ ಆದ್ಮಿ ಪಕ್ಷ ಕೇವಲ ಸರ್ಕಾರೇತರ ಸಂಸ್ಥೆಗಳ ಪಕ್ಷ. ಸಮಾಜ ಸೇವೆಯ ಹೆಸರಿನಲ್ಲಿ ರಾಜಕೀಯಕ್ಕೆ ಬಂದಿದೆ. ಜನರಲ್ಲಿ ಹುಸಿ ನಂಬಿಕೆಯನ್ನು ಹುಟ್ಟುಹಾಕುತ್ತಿದೆ ಎಂದು ಟೀಕಿಸಿದರು.‘ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಜನರನ್ನು ಮರಳು ಮಾಡುತ್ತಿದ್ದರೆ, ಅಮ್ಮ– ಮಗನ ಪಕ್ಷವಾದ ಕಾಂಗ್ರೆಸ್‌ ಕೇವಲ ಭ್ರಷ್ಟಾಚಾರದಲ್ಲಿ ತೊಡಗಿದೆ. ಅಪ್ಪ– ಮಗನ ಪಕ್ಷವಾದ ಜೆಡಿಎಸ್‌ ಜಾತಿ ವಾದಿಗಳ ಪಕ್ಷವಾಗಿದೆ. ಇಂತಹ ಪಕ್ಷಗಳ ವಿರುದ್ಧ ನಮ್ಮ ಅಭ್ಯರ್ಥಿಗಳು ಸೆಣಸಲಿದ್ದಾರೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.