2.8 ಲಕ್ಷ ಮಕ್ಕಳಿಗೆ ಪೋಲಿಯೊ ಹನಿ

7

2.8 ಲಕ್ಷ ಮಕ್ಕಳಿಗೆ ಪೋಲಿಯೊ ಹನಿ

Published:
Updated:

ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಂಗವಾಗಿ ಭಾನವಾರ ನಡೆದ ಲಸಿಕಾ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯಲ್ಲಿ 208005 ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಯಿತು.`ಜಿಲ್ಲೆಯ 2,37,860 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಯೋಜನೆಯಿತ್ತು. ಆದರೂ ಶೇ. 87.54ರಷ್ಟು ಗುರಿ ಸಾಧಿಸಲಾಗಿದೆ. ಈ ವರ್ಷದ ಮೊದಲ ಹಂತದ ಲಸಿಕಾ ಕಾರ್ಯಕ್ರಮ ಜಿಲ್ಲೆಯ ಒಟ್ಟು 881 ಬೂತ್‌ಗಳಲ್ಲಿ ನಡೆಯಿತು~ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎನ್.ಎಂ. ಅಂಗಡಿ `ಪ್ರಜಾವಾಣಿ~ಗೆ ತಿಳಿಸಿದರು.ಚಾಲನೆ: ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ಏರ್ಪಡಿಸಿದ ಸಮಾರಂಭದಲ್ಲಿ ಮಗುವೊಂದಕ್ಕೆ ಪೋಲಿಯೊ ಹನಿ ಹಾಕುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಚಾಲನೆ ನೀಡಿದರು.ನಂತರ ಅವರು ಮಾತನಾಡಿ, ಕಳೆದ ವರ್ಷ ಜಿಲ್ಲೆಯಲ್ಲಿ ಪೋಲಿಯೊ ಪೀಡಿತ ಮಕ್ಕಳ ಕುರಿತು ವರದಿಯಾಗಿಲ್ಲ. ದೇಶದಲ್ಲೂ ವರದಿಯಾಗಿಲ್ಲ. ಇದೇ ರೀತಿ ಇನ್ನೆರಡು ವರ್ಷಗಳಲ್ಲಿ ಯಶಸ್ಸಾದರೆ ವಿಶ್ವ ಆರೋಗ್ಯ ಸಂಘಟನೆಯಿಂದ ಪೋಲಿಯೊ ಮುಕ್ತ ದೇಶವೆಂಬ ಮಾನ್ಯತೆ ಸಿಗುತ್ತದೆ ಎಂದರು.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎನ್.ಎಂ. ಅಂಗಡಿ, ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ ಡಾ. ಎಸ್.ಎಂ. ಹೊನಕೇರಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಎಸ್.ಜಿ. ಬಬ್ರುವಾಡ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಸಂಗೀತಾ, ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ. ಯಶವಂತ, ಪಾಲಿಕೆ ಆರೋಗ್ಯಾಧಿಕಾರಿ ಡಾ. ಪ್ರಭು ಬಿರಾದಾರ ಮೊದಲಾದವರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry