ಶನಿವಾರ, ಮೇ 15, 2021
25 °C

2,802 ಗುಟ್ಕಾ, ತಂಬಾಕು ಪೌಚ್ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ನಿಕೋಟಿನ್ ಅಂಶವಿರುವ ನಿಷೇಧಿತ ಗುಟ್ಕಾ, ಪಾನ್ ಮಸಾಲ ಪದಾರ್ಥ ಮಾರಾಟ ಮಾಡುವವರ ವಿರುದ್ಧ ಕಾರ್ಯಾ ಚರಣೆ ಆರಂಭಿಸಲಾಗಿದೆ. ಚಾಮರಾಜ ನಗರ ತಾಲ್ಲೂಕು- 6, ಕೊಳ್ಳೇಗಾಲ- 5, ಗುಂಡ್ಲುಪೇಟೆ ಹಾಗೂ ಯಳಂದೂರು ತಾಲೂಕಿನಲ್ಲಿ ತಲಾ 4 ಅಂಗಡಿ ಮೇಲೆ ದಾಳಿ ನಡೆಸಲಾಗಿದೆ' ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎನ್. ರಮೇಶ್‌ಬಾಬು ಹೇಳಿದರು.ಸಭೆಯಲ್ಲಿ ಮಾತನಾಡಿದ ಅವರು, ಗುಟ್ಕಾ ಸಗಟುದಾರರು, ಮಾರಾಟಗಾರರು, ವಿತರಕರ ಅಂಗಡಿಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ. 4 ತಾಲ್ಲೂಕು ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶದ ಅಂಗಡಿಗಳ ಮೇಲೆ ದಾಳಿ ನಡೆಸುವ ಕಾರ್ಯ ಮುಂದುವರಿದಿದೆ. ಜೂ. 11ರಿಂದ ಇಲ್ಲಿಯವರೆಗೆ ಒಟ್ಟು 38 ಅಂಗಡಿಗಳಿಂದ 19,500 ರೂಪಾಯಿ ಮೌಲ್ಯದ 2,802 ಗುಟ್ಕಾ, ತಂಬಾಕು ಪೌಚ್ ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.ಜಿಲ್ಲೆಯಲ್ಲಿ ನಿಷೇಧಿತ ನಿಕೋಟಿನ್, ತಂಬಾಕು ಉತ್ಪನ್ನಗಳ ಮಾರಾಟ ನಿಲ್ಲಿಸಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ತಂಡ ರಚಿಸಲಾಗಿದೆ. ಪ್ರತಿ ತಾಲ್ಲೂಕಿಗೂ ವೈದ್ಯಾಧಿಕಾರಿಗಳನ್ನು ಆಹಾರ ಸುರಕ್ಷತಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ವೈದ್ಯರ ತಂಡ ಆಹಾರ ಇಲಾಖೆ ನಿರೀಕ್ಷಕರೊಂದಿಗೆ ಸಮನ್ವಯ ಸಾಧಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುವ ನಿಷೇಧಿತ ತಂಬಾಕು ಮಾರಾಟ, ವಿತರಣೆ, ಸಂಗ್ರಹಣೆ ವಿರುದ್ಧ ಕ್ರಮಕೈಗೊಳ್ಳಲಿದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.