ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

29ಕ್ಕೆ ರಾಜ್ಯಮಟ್ಟದ ಭಾವಾರ್ಣವ ಗಾಯನೋತ್ಸವ ಕಾರ್ಯಕ್ರಮ

Last Updated 25 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಕರ್ನಾಟಕ ಸುಗಮ ಸಂಗೀತ ಸಂಸ್ಥೆಗಳ ಒಕ್ಕೂಟ ರಾಜ್ಯಮಟ್ಟದ `ಭಾವಾರ್ಣವ~ ಗಾಯನೋತ್ಸವ ಕಾರ್ಯಕ್ರಮವನ್ನು ಜನವರಿ 29 ರಂದು ಚಾಮರಾಜಪೇಟೆಯಲ್ಲಿರುವ ಭಾರತೀಯ ಸಂಸ್ಕೃತಿ ವಿದ್ಯಾಪೀಠದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ವಿಜಯ ಹಾವನೂರ ತಿಳಿಸಿದರು.

ಕಾರ್ಯಕ್ರಮವನ್ನು ಕರ್ನಾಟಕ ಸಂಗೀತ ವಿಶ್ವವಿದ್ಯಾಲದ ಕುಲಪತಿ ಡಾ. ಹನುಮಣ್ಣ ನಾಯಕ ದೊರೆ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಡಾ.ಕೆ.ಎನ್.ಪುಷ್ಪಲತಾ  ಅವರು ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಶಿಶುಗೀತೆಗಳು, ದಾಸರವಾಣಿ, ಜನಪದ ಮತ್ತು ಭಾವಗೀತೆಗಳನ್ನು ಗಾಯಕರು ಹಾಡಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ವೀರೇಶ ಬಳ್ಳಾರಿ, ಆನಂದ ಮಾದಲಗೆರೆ ಹಾಗೂ ಟಿ.ರಾಜಾರಾಮ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT