ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಜಿ ಪ್ರಕರಣ: ರಾಜಾಗೆ ಷರತ್ತುಬದ್ಧ ಜಾಮೀನು

Last Updated 15 ಮೇ 2012, 8:40 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಕೇಂದ್ರದ ದೂರಸಂಪರ್ಕ ಖಾತೆಯ ಮಾಜಿ ಸಚಿವ ಎ. ರಾಜಾ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮಂಗಳವಾರ ಷರತ್ತುಬದ್ಧ ಜಾಮೀನು ನೀಡಿದೆ.  

2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ರಾಜಾ ಅವರು ಕಳೆದ 15 ತಿಂಗಳಿನಿಂದ ತಿಹಾರ್ ಜೈಲಿನಲ್ಲಿ ಬಂಧಿತರಾಗಿದ್ದರು. ಅವರು ಮೊದಲ ಬಾರಿಗೆ ಜಾಮೀನು ಮನವಿ ಕೋರಿ ದೆಹಲಿ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು.

~ ರಾಜಾ ಅವರು ಸಲ್ಲಿಸಿದ್ದ ಜಾಮೀನು ಮನವಿ ಅರ್ಜಿಯನ್ನು ಪುರಸ್ಕರಿಸಲಾಗಿದೆ~ ಎಂದು ವಿಶೇಷ ಸಿಬಿಐ ನ್ಯಾಯಾಧೀಶ ಒ.ಪಿ. ಸೈನಿ ಅವರು ಹೇಳಿದರು.

ಷರತ್ತಿನ ಪ್ರಕಾರ ರಾಜಾ ಅವರು ರೂ. 20 ಲಕ್ಷ ಮೊತ್ತದ ವ್ಯೆಯಕ್ತಿಕ ಬಾಂಡ್ ನೀಡಬೇಕು ಹಾಗೂ ಇಬ್ಬರಿಂದ ಅಷ್ಟೇ ಮೊತ್ತದ ಭದ್ರತಾ ಠೇವಣೆಯನ್ನು ನೀಡಬೇಕು. ಜೊತೆಗೆ ನ್ಯಾಯಾಲಯದ ಅನುಮತಿ ಇಲ್ಲದೇ ತಮಿಳುನಾಡಿಗೆ ಹಾಗೂ ಟೆಲಿಕಾಂ ಕಚೇರಿಗೆ ಭೇಟಿ ನೀಡುವಂತಿಲ್ಲ.

ಇದಲ್ಲದೇ ರಾಜಾ ಅವರು ಯಾವುದೇ ಕಾರಣಕ್ಕೂ ಸಾಕ್ಷಿಗಳ ಮೇಲೆ ತಮ್ಮ ಪ್ರಭಾವವನ್ನು ಬೀರಬಾರದು ಎಂಬ ಷರತ್ತನ್ನೂ ನ್ಯಾಯಾಲಯವು ತನ್ನ 14 ಪುಟಗಳ ಆದೇಶದಲ್ಲಿ ವಿಧಿಸಿದೆ.

2ಜಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಾಜಾ ಅವರು ಫೆ.2ರಂದು ಬಂಧನಕ್ಕೆ ಒಳಗಾಗಿದ್ದರು.

ಡಿಎಂಕೆ ಸ್ವಾಗತ: ಡಿಎಂಕೆ ಸಂಸದ ಎ. ರಾಜಾ ಅವರಿಗೆ ದೆಹಲಿ ನ್ಯಾಯಾಲಯವು ಜಾಮೀನು ನೀಡಿರುವುದನ್ನು ಡಿಎಂಕೆ ಪಕ್ಷವು ಸ್ವಾಗತಿಸಿದೆ.

`ನ್ಯಾಯಾಲಯದ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಪ್ರಕರಣದಲ್ಲಿ ರಾಜಾ ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಿ ಹೊರಬರುತ್ತಾರೆ ಎಂಬ ನಂಬಿಕೆ ನಮಗಿದೆ~ ಎಂದು ಡಿಎಂಕೆ ನಾಯಕ ತಿರುಚಿ ಶಿವ ಅವರು ನ್ಯಾಯಾಲಯದ ಆದೇಶ ನಂತರ ಇಲ್ಲಿ ಪ್ರತಿಕ್ರಿಯಿಸಿದರು.

ರಾಜಾ ಅವರು ಇನ್ನು ಮುಂದಿನ ದಿನಗಳಲ್ಲಿ ಸಂಸತ್ತಿನ ಕಲಾಪದಲ್ಲಾಗಲಿ ಅಥವಾ ಡಿಎಂಕೆ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಬಹುದೇ ಎಂದು ಮಾಧ್ಯಮದವರು ಪ್ರಶ್ನಿಸಿದಾಗ `ನ್ಯಾಯಾಲಯವು ವಿಧಿಸಿರುವ ಷರತ್ತುಬದ್ಧ ಜಾಮೀನು ಅಂಶಗಳ ಆಧಾರದ ಮೇಲೆ ಅವರು ಭಾಗಿಯಾಗಬಹುದು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT