ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ರಂದು ಜಾತ್ರೆ: ಮಲೆಮಹದೇಶ್ವರ ಬೆಟ್ಟಕ್ಕೆ ಹೆಚ್ಚುವರಿ ಬಸ್

Last Updated 25 ಸೆಪ್ಟೆಂಬರ್ 2013, 9:34 IST
ಅಕ್ಷರ ಗಾತ್ರ

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾಲಯ ಅಮಾವಾಸ್ಯೆ ಜಾತ್ರೆಗೆ ಭಕ್ತಾದಿಗಳು ತೆರಳಲು ಅನುಕೂಲವಾಗುವಂತೆ ಕೆಎಸ್ಆರ್‌ಟಿಸಿ ಚಾಮರಾಜನಗರ ವಿಭಾಗವು ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ.

ಅ. 2ರಿಂದ 5ರವರೆಗೆ ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಬೆಂಗಳೂರು, ಚನ್ನಪಟ್ಟಣ, ಮಂಡ್ಯ, ಕನಕಪುರ, ಮಳವಳ್ಳಿ, ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ ಬಸ್ ನಿಲ್ದಾಣ ದಿಂದ ವಿಶೇಷ ಬಸ್‌ಗಳು ಮಹದೇಶ್ವರ ಬೆಟ್ಟಕ್ಕೆ ಸಂಚರಿಸಲಿವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಸಿ. ನಂಜುಂಡಪ್ಪ ತಿಳಿಸಿದ್ದಾರೆ.

ಗೋಲಕ ಹಣ ಎಣಿಕೆ: ಯಾತ್ರಾ ಕ್ಷೇತ್ರವಾದ ಮಹದೇಶ್ವರ ಬೆಟ್ಟದ ಶ್ರೀಮಲೆ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಟ್ಟಿರುವ ಗೋಲಕಗಳ ಹಣವನ್ನು ಎಣಿಕೆ ಮಾಡುವ ಕಾರ್ಯವು ಸೆ.  27ರಂದು ನಡೆಯಲಿದೆ.

ಗೋಲಕಗಳಲ್ಲಿ ಸಂಗ್ರಹವಾಗಿರುವ ಹಣವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿಯ ಸಹಯೋಗದೊಂದಿಗೆ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಎಣಿಕೆ ಮಾಡಲಾಗುವುದು ಎಂದು ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT