ದಾವಣಗೆರೆ: ಮುರುಘಾರಾಜೇಂದ್ರ ವಿರಕ್ತಮಠ ಹಾಗೂ ಮುರು ಘರಾಜೇಂದ್ರ ಶಿವಯೋಗಾಶ್ರಮ ಟ್ರಸ್ಟ್ ವತಿಯಿಂದ ಬಸವ ಜಯಂತಿ ಶತಮಾನೋತ್ಸವ ವರ್ಷಾಚರಣೆಯ ಅಂಗವಾಗಿ ಜುಲೈ 3ರ ಸಂಜೆ 6.30ಕ್ಕೆ ದೊಡ್ಡಪೇಟೆಯ ವಿರಕ್ತ ಮಠದಲ್ಲಿ `ಶರಣ ಸಂಗಮ~ ಕಾರ್ಯಕ್ರಮ ನಡೆಯಲಿದೆ.

ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸುವರು. ಬಸವಪ್ರಭು ಸ್ವಾಮಿ ಉಪಸ್ಥಿತರಿರುವರು. ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶಿವಕುಮಾರ್, ವೀರಪ್ಪ ಎಂ. ಬಾವಿ ಆಗಮಿಸುವರು. ಎಆರ್ಜಿ ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ ಜವಳಿ `ಅಪಾಯ ಮತ್ತು ಜ್ಞಾನೋದಯ~ ವಿಷಯದ ಬಗ್ಗೆ ಉಪನ್ಯಾಸ ನೀಡುವರು. ರೇವಣಸಿದ್ದಪ್ಪ ಹಾಗೂ ತಂಡ ವಚನ ಗಾಯನ ನಡೆಸಿಕೊಡಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.