ಭಾನುವಾರ, ಮೇ 16, 2021
29 °C

3 ಲಾರಿ ಲೋಡ್ ಮರಳು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ:  ತಾಲ್ಲೂಕಿನ ಕೆಆರ್‌ಎಸ್‌ನ ಹೊಸ ಸೇತುವೆ ಮತ್ತು ಹೊಂಗಹಳ್ಳಿಯ ಪಂಪ್‌ಹೌಸ್ ಬಳಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಸ್ಥಳಕ್ಕೆ ತಹಶೀಲ್ದಾರ್ ಅರುಳ್‌ಕುಮಾರ್ ಶುಕ್ರವಾರ ದಿಢೀರ್ ದಾಳಿ ನಡೆಸಿದ್ದು, ಸುಮಾರು 3 ಲಾರಿ ಲೋಡ್ ಮರಳನ್ನು ವಶಪಡಿಸಿಕೊಂಡಿದ್ದಾರೆ.  ಕೆಆರ್‌ಎಸ್‌ನಿಂದ ಕಟ್ಟೇರಿ ಕಡೆಗೆ ಸಂಪರ್ಕ ಕಲ್ಪಿಸುವ ಹೊಸ ಸೇತುವೆಯ ಕೆಳಗೆ, ಕಾವೇರಿ ನದಿಯಲ್ಲಿ ಹಲವು ದಿನಗಳಿಂದ ಅಕ್ರಮ ಮರಳು ದಂಧೆ ನಡೆಯುವ ಬಗ್ಗೆ ಸಿಕ್ಕ ಸುಳಿವು ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದರು. ಅಧಿಕಾರಿಗಳು ಬರುತ್ತಿದ್ದಂತೆಯೇ ಮರಳು ಎತ್ತುವಳಿ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ. ಹೊಂಗಹಳ್ಳಿ ಪಂಪ್‌ಹೌಸ್ ಬಳಿ ಕೂಡ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ದೂರುಗಳ ಬಂದ ಹಿನ್ನೆಲೆಯಲ್ಲಿ ಅಲ್ಲಿಗೂ ಅಧಿಕಾರಿಗಳು ಭೇಟಿ ನೀಡಿ ಸುಮಾರು ಎರಡು ಲಾರಿ ಲೋಡ್ ಮರಳು ವಶಪಡಿಸಿಕೊಂಡಿದ್ದಾರೆ.ಹರಾಜು ಮಾಡಲಾಗುತ್ತದೆ. ತಾಲ್ಲೂಕಿನ ಮಹದೇವಪುರ ಬಳಿ ಕಾವೇರಿ ನದಿಯಲ್ಲಿ ಹರಿಗೋಲು ಬಳಸಿ ಮರಳು ಎತ್ತುವ ಬಗ್ಗೆ ದೂರುಗಳು ಬಂದಿವೆ. ಒಂದೆರಡು ದಿನಗಳಲ್ಲಿ ಅಲ್ಲಿಗೂ ತೆರಳಿ ಪರಿಶೀಲಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು. ಅಕ್ರಮ ಮರಳು ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಕೆಆರ್‌ಎಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ್, ಕಂದಾಯ ನಿರೀಕ್ಷ ಪ್ರಸನ್ನಕುಮಾರ್ ಜತೆಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.