ಶನಿವಾರ, ಏಪ್ರಿಲ್ 17, 2021
32 °C

3 ವರ್ಷಕ್ಕೊಮ್ಮೆ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪ್ರತಿ ವರ್ಷ ಆಚರಿಸುವ ಅಗತ್ಯವಿಲ್ಲ. ಪ್ರತಿ ಮೂರು ವರ್ಷಕ್ಕೊಮ್ಮೆ ಆಯಾ ಅಧ್ಯಕ್ಷರ ಅವಧಿಯಲ್ಲಿ ಒಮ್ಮೆ ಆಚರಣೆ ಮಾಡಿದರೆ ಸಾಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಇಲ್ಲಿ ಮಂಗಳವಾರ ಅಭಿಪ್ರಾಯಪಟ್ಟರು.ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಚಟುವಟಿಕೆ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸರ್ಕಾರ ಸಮ್ಮೇಳನಕ್ಕೆ ಹಣ ಕೊಟ್ಟು ತಾನು ಹೇಳಿದಂತೆ ಕೇಳಬೇಕು ಎಂಬ ಮನೋಭಾವ ಪ್ರದರ್ಶಿಸುತ್ತದೆ. ಸಮ್ಮೇಳನಕ್ಕೆ ಹಣ ಪಡೆದರೂ ಸರ್ಕಾರದ ನಿಲುವನ್ನು ಅಗತ್ಯವಿದ್ದರೆ ಪ್ರತಿಭಟಿಸಬೇಕಾಗುತ್ತದೆ. 1ರಿಂದ 8ನೇ ತರಗತಿವರೆಗೆ ಖಾಸಗಿ ಶಾಲೆಗಳಿಗೂ ಮಾತೃಭಾಷೆ ಮಾಧ್ಯಮವನ್ನು ಕಡ್ಡಾಯಗೊಳಿಸಬೇಕು. ಭಾಷೆಯಾಗಿ ಇಂಗ್ಲಿಷ್ ಕಲಿಸಲಿ. ಈ ನಿಟ್ಟಿನಲ್ಲಿ ಜುಲೈ 21ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.