ರಾಮನಗರ: ಜಿಲ್ಲಾ ಕೇಂದ್ರವಾಗಿ ಮೂರು ವರ್ಷಗಳು ಕಳೆದರೂ ಸಾರ್ವಜನಿಕರಿಗೆ ಅಗತ್ಯವಾಗಿರುವ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡುವಲ್ಲಿ ರಾಜಕಾರಣಿಗಳು ವಿಫಲರಾಗಿದ್ದಾರೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್.ರುದ್ರಮುನಿ ಅಸಮಧಾನ ವ್ಯಕ್ತಪಡಿಸಿದರು.

ನಗರದ ವಿವೇಕಾನಂದನಗರದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ನ ನೂತನ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಹಿಂದುಳಿದ ಜಿಲ್ಲೆ ಎಂದು ಕರೆಸಿಕೊಳ್ಳುವ ಕೊಪ್ಪಳ ಜಿಲ್ಲೆಗಿಂತಲೂ ರಾಮನಗರ ಅತಿ ಹಿಂದುಳಿದಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬಹು ಹಿಂದಿನಿಂದಲೂ ನಾಡಿನ ಗಣ್ಯಾತಿಗಣ್ಯ ರಾಜಕಾರಣಿಗಳು ಆಡಳಿತ ನಡೆಸಿದ್ದಾರೆ. ಆದರೂ ಸಾರ್ವಜನಿಕರಿಗೆ ಹಾಗೂ ಉದ್ಯೋಗಿಗಳಿಗೆ ಅಗತ್ಯವಾದ ಮೂಲ ಸೌಕರ್ಯಗಳ ಕೊರತೆ ಇವೆ. ರಾಮನಗರವು ಬೆಂಗಳೂರಿಗೆ ಕೇವಲ 47 ಕಿ.ಮೀ. ಹತ್ತಿರದಲ್ಲಿದೆ. ಆದರೂ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸಿಲ್ಲ. ಬೆಂಗಳೂರಿಗರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಟ್ಟು ಪಕ್ಕದ ರಾಮನಗರ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿರುವುದು ವಿಷಾದನೀಯ ಎಂದರು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುತ್ತದೆ. ಉದ್ಯೋಗಾವಕಾಶಗಳನ್ನು ಸ್ಥಳೀಯರಿಗೆ ಮೀಸಲಿಟ್ಟಿದೆ. ಬ್ಯಾಂಕಿನಲ್ಲಿ ಹೊಸ ಸದಸ್ಯರನ್ನು ನೊಂದಾಯಿಸುವವರಿಗೆ ಆಕರ್ಷಕ ಕಮಿಷನ್ ನೀಡುತ್ತದೆ. ಗ್ರಾಹಕರಿಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಮುಂಚೂಣಿಯಲ್ಲಿದೆ.

ರಾಮನಗರದ ನಾಗರಿಕರು ಈ ಬ್ಯಾಂಕಿನ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಡಿಜಿಎಂ ಸುಬ್ರಮಣ್ಯಕುಮಾರ್, ಎಜಿಎಂ ಖುಲ್ಲಾರ್, ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್, ವೃತ್ತ ಪ್ರಬಂಧಕ ಸತ್ಯನಾರಾಯಣ, ರಾಮನಗರ ಶಾಖೆಯ ವ್ಯವಸ್ಥಾಪಕ ಭೀಮೇಶ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.