ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ತಿಂಗಳಿಗೊಮ್ಮೆ ಸಭೆ ನಡೆಸಲು ಒತ್ತಾಯ

Last Updated 2 ಜೂನ್ 2011, 10:50 IST
ಅಕ್ಷರ ಗಾತ್ರ

ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಕಡ್ಡಾಯವಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ, ತಾಲ್ಲೂಕು ಹಾಗೂ ಉಪ ವಿಭಾಗ ಮಟ್ಟದಲ್ಲಿ ನಡೆಸುವಲ್ಲಿ ಜಿಲ್ಲಾಡಳಿತ ವಿಫಲವಾಗಿ ಎಂದು ದಲಿತ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಒಕ್ಕೂಟದ ಜಿಲ್ಲಾ ಸಂಚಾಲಕ ಸಿ.ಎಂ.ಕೃಷ್ಣಮೂರ್ತಿ, ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂಬ ನಿಯಮವಿದ್ದರೂ ಜಿಲ್ಲಾಧಿಕಾರಿ ಸಭೆ ಕರೆಯುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಮೇ 27ರಂದು ನಡೆಯಬೇಕಿದ್ದ ಸಭೆಯನ್ನು ಮುಂದೂಡುವ ಮೂಲಕ ಕಾನೂನು ಉಲ್ಲಂಘಿ ಸಿದ್ದಾರೆ ಎಂದು ದೂರಿದರು.

ಸಭೆ ನಡೆಸದೆ ಎಸ್‌ಸಿ/ಎಸ್‌ಟಿ ವರ್ಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ದಲಿತ ಸಂಘಟನೆಯವರೇ ಸಭೆ ನಡೆಸಿ ಎಂದು ಮನವಿ ಮಾಡಬೇಕಾದ ಅನಿವಾರ್ಯವಾಗಿದೆ. ಜಿಲ್ಲೆಯಲ್ಲಿ ಶೇ.22.75 ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿದ್ದು, ಇವರಿಗೆ ಮೀಸಲಾಗಿರುವ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹೆಸರಿನಲ್ಲಿ ಇತರೇ ಕಾಮಗಾರಿಗೆ ಬಳಸಿಕೊಳ್ಳುತ್ತಿದ್ದಾರೆ. ಜೊತೆಗೆ ಕೋಟ್ಯಂತರ ರೂಪಾಯಿ ಅನುದಾನ ವಾಪಸ್ ಹೋಗುತ್ತಿದೆ ಎಂದರು.

ಸಭೆ ನಡೆಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಅಧಿಕಾರ ಜಿಲ್ಲಾಧಿಕಾರಿಗೆ ಇದ್ದರೂ ಇದುವರೆಗೂ ಕ್ರಮ ತೆಗೆದುಕೊಂಡಿಲ್ಲ. ಜಿಲ್ಲೆ, ತಾಲ್ಲೂಕು, ಹೋಬಳಿ ಮಟ್ಟದ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಿತರಕ್ಷಣಾ ಸಮಿತಿ ಸಭೆ ನಡೆಸಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ದೌರ್ಜನ್ಯದ ವಿರುದ್ಧ ಕ್ರಮ ವಹಿಸಬೇಕು ಹಾಗೂ ಸರ್ಕಾರ ನೀಡುವ ಅನುದಾನವನ್ನು ಸಮರ್ಪಕವಾಗಿ ವಿತರಿಸಬೇಕು. ಇಲ್ಲದಿದ್ದರೆ ದೌರ್ಜನ್ಯಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹಾಗೂ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿ ಹೈ ಕೋರ್ಟ್ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ರಾಷ್ಟ್ರೀಯ ದಲಿತ ಮಾನವ ಹಕ್ಕುಗಳ ಆಂದೋಲನ ಕಾರ್ಯದರ್ಶಿ ಸಿದ್ದರಾಜು, ಡಾ.ಬಿ.ಆರ್. ಅಂಬೇಡ್ಕರ್ ಸಂಘಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಸಿ.ಕೆ ಮಂಜುನಾಥ್, ನಾಗೇಶ್, ಜಯಶಂಕರ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT