ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಪ್ರಕರಣಗಳಿಗೆ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

Last Updated 28 ಅಕ್ಟೋಬರ್ 2011, 10:15 IST
ಅಕ್ಷರ ಗಾತ್ರ

 ಬೆಂಗಳೂರು, (ಪಿಟಿಐ):  ಭೂ ಹಗರಣಗಳ ಕಾರಣದಿಂದ ಈಗ ಜೈಲಿನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಟ್ಟು ಐದು ಸರ್ಕಾರಿ ಭೂಮಿಯ ಡಿ ನೋಟಿಫಿಕೇಷನ್ ಅವ್ಯವಹಾರದ ಪ್ರಕರಣಗಳ ಪೈಕಿ ಮೂರು ಪ್ರಕರಣಗಳಲ್ಲಿ ತಮಗೆ ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿ ಶುಕ್ರವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ದೂರುದಾರರು ವಕೀಲರ ಸಲಹೆ ಪಡೆಯಲು ಮತ್ತು ಈ ನಿರೀಕ್ಷಣಾ ಜಾಮೀನು ಅರ್ಜಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯಾವಕಾಶ ನೀಡಿರುವ ನ್ಯಾಯಮೂರ್ತಿ ಎಚ್. ಬೋಪಣ್ಣ ಅವರು ಅರ್ಜಿ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿದ್ದಾರೆ.

ದೂರುದಾರ ಸಿರಾಜಿನ್ ಬಾಷಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಸದ್ಯ ಜೈಲಿನಲ್ಲಿರುವ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರು, ಈಗಾಗಲೇ ಎರಡು ಪ್ರಕರಣಗಳಲ್ಲಿ ಪೂರ್ಣ ಪ್ರಮಾಣದ ಜಾಮೀನು ಕೋರಿ ಹೈಕೋರ್ಟ್ ಕದ ತಟ್ಟಿರುವುದನ್ನು ಸ್ಮರಿಸಬಹುದು. ಈ ಎರಡು ಪ್ರಕರಣಗಳ ವಿಚಾರಣೆಯನ್ನು ಹೈ ಕೋರ್ಟ್ ನ ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರ ಪೀಠವು ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT