ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಮನೆಗಳಲ್ಲಿ ಬೀಗ ಒಡೆದು ಕಳವು

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮಹದೇವಪುರ, ಎಚ್‌ಎಸ್‌ಆರ್ ಲೇಔಟ್ ಮತ್ತು ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ದುಷ್ಕರ್ಮಿಗಳು ಮೂರು ಮನೆಗಳಲ್ಲಿ ಕಳವು ಮಾಡಿದ್ದಾರೆ.

 ಹರಿದಾಸ್ ಎಂಬುವರ ಮನೆಯ ಮುಂಬಾಗಿಲ ಬೀಗ ಒಡೆದ ಕಳ್ಳರು ಎರಡು ಲಕ್ಷ ನಗದು ಹಾಗೂ ಚಿನ್ನಾಭರಣ ಕಳವು ಮಾಡಿರುವ ಘಟನೆ ಮಹದೇವಪುರದ ಅಬ್ಬಾಯರೆಡ್ಡಿ ಲೇಔಟ್‌ನಲ್ಲಿ ನಡೆದಿದೆ.

ಹರಿದಾಸ್ ಅವರು ಜಯನಗರದಲ್ಲಿರುವ ಮಗಳ ಮನೆಗೆ ಅ. 6ರಂದು ಹೋಗಿದ್ದಾಗ ಕಳವು ಮಾಡಲಾಗಿದೆ. ಅ.11ರಂದು ಪ್ರಕರಣ ಬೆಳಕಿಗೆ ಬಂದಿದೆ. ಟಿಫನ್ ಬಾಕ್ಸ್‌ನಲ್ಲಿದ್ದ ಹಣ ಮತ್ತು 25 ಸಾವಿರ ರೂಪಾಯಿ ಮೌಲ್ಯದ ಆಭರಣ ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

 ಮಹದೇವಪುರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

  ಎಚ್‌ಎಸ್‌ಆರ್ ಲೇಔಟ್ ಮೂರನೇ ಸೆಕ್ಟರ್‌ನಲ್ಲಿರುವ ರಾಜೀವ್ ಕುಮಾರ್ ಎಂಬುವರ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಕಳವು ಮಾಡಿದ್ದಾರೆ.

ರಾಜೀವ್ ಅವರು ಮಂಗಳವಾರ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದಾಗ ಕೃತ್ಯ ನಡೆಸಿದ್ದಾರೆ. ಚಿನ್ನದ ಸರ, ಎರಡು ಉಂಗುರ, ಬ್ರೇಸ್‌ಲೆಟ್ ಹಾಗೂ ಬೆಳ್ಳಿ ಗೆಜ್ಜೆಗಳನ್ನು ಕಳವು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಚ್‌ಎಸ್‌ಆರ್ ಲೇಔಟ್ ಪೊಲೀಸರು ತಿಳಿಸಿದ್ದಾರೆ.

ಮನೆ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ರೂ 2.25 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ಅಮೃತಹಳ್ಳಿಯ ಮರಿಯನಪಾಳ್ಯದಲ್ಲಿ ನಡೆದಿದೆ.

ಮನೆಯ ಮಾಲೀಕರಾದ ಅನ್ನಬೆಲೆ ಅವರು ಸೆ.10ರಂದು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದರು.

ಸೆ.25ರಂದು ಅವರು ಮನೆಗೆ ಮರಳಿದಾಗ ಕಳವಾಗಿದ್ದು ಗೊತ್ತಾಗಿದೆ. ಅಲ್ಮೇರಾದಲ್ಲಿದ್ದ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದಾರೆ. ಕಾರಣಾಂತರದಿಂದ ತಡವಾಗಿ ದೂರು ನೀಡಿರುವುದಾಗಿ ಅನ್ನಬೆಲೆ ಅವರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಮೃತಹಳ್ಳಿ ಪೊಲೀಸರು    ಹೇಳಿದ್ದಾರೆ.

ದರೋಡೆ
ಸಿನಿಮಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ವಿಜಯ್ ಎಂಬುವರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಮೊಬೈಲ್ ಫೋನ್ ಮತ್ತು ಪರ್ಸ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೋರಮಂಗಲ ಎಂಬತ್ತು ಅಡಿ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ವಿಜಯ್ ಅವರು ಬಾಲಾಜಿ ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ನಂಜಪ್ಪ ಲೇಔಟ್‌ನಲ್ಲಿರುವ ಮನೆಗೆ ಹೋಗುತ್ತಿದ್ದಾಗ ನಾಲ್ವರು ಅವರನ್ನು ಅಡ್ಡಗಟ್ಟಿದ್ದಾರೆ. ರಸ್ತೆಯ ಪಕ್ಕದ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬೆದರಿಸಿ ಮೊಬೈಲ್ ಮತ್ತು ಪರ್ಸ್ ದೋಚಿದ್ದಾರೆ. ದರೋಡೆಯ ಒಟ್ಟು ಮೌಲ್ಯ ಒಂಬತ್ತು ಸಾವಿರ ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT