30ನೇ ರಾಜ್ಯ ಟೆಕ್ವಾಂಡೊ ಚಾಂಪಿಯನ್ಷಿಪ್: ಧಾರವಾಡ ಎಸ್ಎಐ ತಂಡಕ್ಕೆ ಪ್ರಶಸ್ತಿ

ಮಲೇಬೆನ್ನೂರು: ಧಾರವಾಡದ ಭಾರತೀಯ ಕ್ರೀಡಾ ಪ್ರಾಧಿಕಾರ ತಂಡ ಇಲ್ಲಿನ ಸುನ್ನಿ ಜಾಮಿಯಾ ಶಾದಿ ಮಹಲ್ನಲ್ಲಿ ಸೋಮವಾರ ಮುಕ್ತಾಯವಾದ 30ನೇ ರಾಜ್ಯಮಟ್ಟದ ಟೆಕ್ವಾಂಡೊ ಚಾಂಪಿಯನ್ಶಿಪ್- 2012ರಲ್ಲಿ ಸೀನಿಯರ್ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು.
ಜೂನಿಯರ್ ಬಾಲಕರ ವಿಭಾಗದಲ್ಲಿಯೂ ಧಾರವಾಡದ ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡ ಪ್ರಶಸ್ತಿ ಗೆದ್ದರೆ, ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡ ರನ್ನರ್ಅಪ್ ಸ್ಥಾನ ಗಳಿಸಿತು. ಬೆಂಗಳೂರು ಗ್ರಾಮಾಂತರ ತಂಡ ತೃತೀಯ ಸ್ಥಾನ ಪಡೆಯಿತು.
ಜೂನಿಯರ್ ಬಾಲಕಿಯರ ವಿಭಾಗದಲ್ಲಿ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡ ಮತ್ತು ಬೆಂಗಳೂರು ಗ್ರಾಮಾಂತರ ತಂಡ ಕ್ರಮವಾಗಿ ಮೊದಲ ಎರಡು ಸ್ಥಾನ ಗಳಿಸಿದರೆ, ಧಾರವಾಡ ತಂಡ 3ನೇ ಸ್ಥಾನ ಪಡೆಯಿತು.
ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಭಾರತೀಯ ಕ್ರೀಡಾ ಪ್ರಾಧಿಕಾರ ಧಾರವಾಡ ತಂಡ 24 ಪಾಯಿಂಟ್ಸ್ ಗಳಿಸಿದರೆ, ಬೆಂಗಳೂರು ಗ್ರಾಮಾಂತರ ತಂಡ ತೃತೀಯ ಸ್ಥಾನ ಪಡೆಯಿತು.
ಮಹಿಳಾ ವಿಭಾಗದಲ್ಲಿ ಬೆಂಗಳೂರು ಜಿಲ್ಲಾ ತಂಡ 13 ಅಂಕ ಗಳಿಸಿ ಪ್ರಥಮ ಸ್ಥಾನ, ಭಾರತೀಯ ಕ್ರೀಡಾ ಪ್ರಾಧಿಕಾರ ತಂಡ 9 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಧಾರವಾಡದ ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡ 8 ಅಂಕ ಪಡೆದು ತೃತೀಯ ಸ್ಥಾನ ಪಡೆದವು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.