ಮಂಗಳವಾರ, ಜೂನ್ 22, 2021
28 °C

30ರಂದು ಬಿಜೆಪಿ ಸೇರ್ಪಡೆ: ಅನಿಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಮೋದಿ ಅವರನ್ನು ಬೆಂಬಲಿಸಲು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯದ ಮೇರೆಗೆ ಅಪಾರ ಬೆಂಬಲಿಗರೊಂದಿಗೆ  ಇದೇ 30 ರಂದು ಬಿಜೆಪಿಗೆ  ಸೇರ್ಪಡೆ ಆಗುತ್ತಿರುವುದಾಗಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಮುಖಂಡ ಅನಿಲ ಮೆಣಸಿನಕಾಯಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಪಕ್ಷದ ಸಂಸ್ಥಾಪಕ ಅಧ್ಯಕ್ಷ ಬಿ. ಶ್ರೀರಾಮುಲು ಅವರ ತೀರ್ಮಾನ ಹಾಗೂ ದೇಶಕ್ಕೆ ನರೇಂದ್ರ ಮೋದಿ ಅವರ ನಾಯಕತ್ವದ ಆಡಳಿತ ಬೇಕು ಎನ್ನುವ ಉದ್ದೇಶದಿಂದ ಅವರಿಗೆ ಬಿಜೆಪಿಗೆ ಬೆಂಬಲ ಸೂಚಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಕೇಂದ್ರದ ಯುಪಿಎ ಸರ್ಕಾರ ಹತ್ತು ವರ್ಷದ ಭ್ರಷ್ಟಾಚಾರದ ಆಡಳಿತ ಜನರಿಗೆ ಬೇಸರ ತಂದಿದೆ.ಕಳೆದ ಚುನಾವಣೆಯಲ್ಲಿ ಬಿಜೆಪಿ ಮೂರು ಭಾಗಗಳಾಗಿದ್ದರಿಂದ ಅಧಿಕಾರದಿಂದ ವಂಚಿತರಾಗಬೇಕಾಯಿತು. ಜಿಲ್ಲಾ ಉಸ್ತುವಾರಿ ಸಚಿವರು  ಜನರ ಸಮಸ್ಯೆ  ಹಾಗೂ ನೋವಿಗೆ ಸ್ಪಂದಿಸುತ್ತಿಲ್ಲ. ಗೆದ್ದ ಆರಂಭದಲ್ಲಿ ಅವಳಿ ನಗರಕ್ಕೆ ಪ್ರತಿ ಎರಡು ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಸುವುದಾಗಿ ಹೇಳಿದ್ದರು. ಈಗ 15-20 ದಿನಗಳಾದರೂ ನೀರು ಸಿಗುತ್ತಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಜನರು ಪಾಠ ಕಲಿಸಲಿದ್ದಾರೆ ಎಂದರು.ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಿಧಾನಸಭಾ ಮತಕ್ಷೇತ್ರದ ಜನತೆ ತಮಗೆ ಅಪಾರ ಬೆಂಬಲ ಸೂಚಿಸಿದ್ದಾರೆ. ಮುಂಬರುವ ದಿನಗಳಲ್ಲಿ ಜನರ ಸಮಸ್ಯೆ ಮುಂದಿಟ್ಟುಕೊಂಡು ಹೋರಾಟ ಮಾಡುವ ಮೂಲಕ ಜನತೆಯ ಋಣ ತೀರಿಸಬೇಕಾಗಿದೆ. ಜತೆಗೆ ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಿಂದಲೇ ಕಿತ್ತೆಸೆಯಲಾಗುವುದು ಎಂದು ತಿಳಿಸಿದರು. ನಗರಸಭೆ  ಸದಸ್ಯರಾದ ಮಂಜುನಾಥ ಮುಳಗುಂದ, ರಾಘವೇಂದ್ರ ಯಳವತ್ತಿ, ನಾಗಲಿಂಗ ಐಲಿ, ಶ್ರೀನಿವಾಸ ಕರಿ, ಸಂತೋಷ ಮೇಲಗಿರಿ,  ಎಸ್.ಎಚ್. ಶಿವನಗೌಡರ, ಮುಖಂಡರಾದ ವೆಂಕಟೇಶ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.