30ರಂದು ಮಂಡ್ಯಕ್ಕೆ ಸೋನಿಯಾ ಗಾಂಧಿ

7

30ರಂದು ಮಂಡ್ಯಕ್ಕೆ ಸೋನಿಯಾ ಗಾಂಧಿ

Published:
Updated:

ಬೆಂಗಳೂರು: ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆ ಮತ್ತು ಇತ್ತೀಚೆಗೆ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಕೆಪಿಸಿಸಿ ಇದೇ 30ರಂದು ಮಂಡ್ಯದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವರು.ಸೋನಿಯಾ ಅವರ ಸೂಚನೆಯಂತೆ ಈ ಸಮಾವೇಶ ಆಯೋಜಿಸಲಾಗಿದೆ. ಮಂಡ್ಯದ ಸರ್‌.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ವಸತಿ ಸಚಿವ ಎಂ.ಎಚ್‌.ಅಂಬರೀಷ್‌ ಮತ್ತಿತರರು ಶುಕ್ರವಾರ ಕ್ರೀಡಾಂಗಣಕ್ಕೆ ಭೇಟಿನೀಡಿ ಸಿದ್ಧತೆ ಪರಿಶೀಲಿಸುವರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry