ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30 ರಂದು ಮಂಡ್ಯಕ್ಕೆ ಸೋನಿಯಾ

ಮತದಾರರಿಗೆ ಕೃತಜ್ಞತಾ ಸಮಾರಂಭ
Last Updated 26 ಸೆಪ್ಟೆಂಬರ್ 2013, 8:24 IST
ಅಕ್ಷರ ಗಾತ್ರ

ಮಂಡ್ಯ: ರಾಜ್ಯದಲ್ಲಿನ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಸೆ. 30ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಸಮಾರಂಭದಲ್ಲಿ ಎರಡು ಲಕ್ಷ ಜನ ಭಾಗವಹಿಸಲಿದ್ದಾರೆ ಎಂದು ಶಾಸಕ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ಉಸ್ತುವಾರಿಯಾದ ದಿಗ್ವಿಜಯ್‌ಸಿಂಗ್‌ ಸೇರಿದಂತೆ ಕೇಂದ್ರ ಸಚಿವರು ಹಾಗೂ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರೂ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ’ ಎಂದು ಹೇಳಿದರು.

ಸೋನಿಯಾ ಗಾಂಧಿ ಅವರು ತಿರುವನಂತಪುರದಿಂದ ಹೆಲಿಕಾಪ್ಟರ್‌ ಮೂಲಕ ಮಂಡ್ಯಕ್ಕೆ ಆಗಮಿಸಲಿದ್ದು, ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ಕ್ಕೆ ನಡೆಯುವ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ನುಡಿದರು.

‘ವಿಧಾನಸಭೆ ಮತ್ತು ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಸೋನಿಯಾ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆಯೇ ವಿನಾ, 2014ರ ಸಾರ್ವತ್ರಿಕ ಚುನಾವಣೆಯ ಪ್ರಚಾರ ಸಭೆಯಲ್ಲ ಎಂದರು.

ಲೋಕೋಪಯೋಗಿ ಸಚಿವ ಎಚ್‌.ಸಿ.ಮಹದೇವಪ್ಪ ಮಾತನಾಡಿ, ‘ಸೆ. 30ರಂದು ನಡೆಯಲಿರುವ ಕೃತಜ್ಞತಾ ಸಮಾವೇಶದ ಹಿನ್ನಲೆಯಲ್ಲಿ ಈಗಾಗಲೇ ಬ್ಲಾಕ್‌ ಹಂತದಲ್ಲಿ ಮುಖಂಡರು, ಕಾರ್ಯಕರ್ತರ ಸಭೆ ಕರೆದು ಚರ್ಚಿಸಲಾಗಿದೆ. ಸಮಾವೇಶವು ಕಾಂಗ್ರೆಸ್‌ ಪಕ್ಷದ ಒಗ್ಗಟ್ಟು ಮತ್ತು ಶಕ್ತಿ ಪ್ರದರ್ಶನಕ್ಕೂ ವೇದಿಕೆ ಆಗಲಿದೆ. ರಾಜಕೀಯ ಸಂದೇಶವನ್ನೂ ರವಾನಿಸಲಿದೆ’ ಎಂದು ಹೇಳಿದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್‌.ಆತ್ಮಾನಂದ, ಮಾಜಿ ಶಾಸಕ ಶಿವರಾಮೇಗೌಡ, ವೀಕ್ಷಕ ನಾರಾಯಣಸ್ವಾಮಿ, ನಗರಸಭೆ ಅಧ್ಯಕ್ಷ ಸಿದ್ದರಾಜು, ಯುವ ಘಟಕ ಅಧ್ಯಕ್ಷ ಎಂ.ಎಸ್‌.ಚಿದಂಬರ್‌, ಕೆಪಿಸಿಸಿ ಸದಸ್ಯ ಟಿ.ಎಸ್‌.ಸತ್ಯಾನಂದ, ಮುಖಂಡ ಅಮರಾವತಿ ಚಂದ್ರಶೇಖರ್‌ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT