ಬುಧವಾರ, ಏಪ್ರಿಲ್ 21, 2021
32 °C

300 ಶಾಲೆಗಳ ಆರಂಭಕ್ಕೆ ಪ್ರಸ್ತಾವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ರಾಜ್ಯದಲ್ಲಿ 300 ಪ್ರೌಢ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. 138 ಶಾಲೆ ಆರಂಭಕ್ಕೆ ಶೀಘ್ರ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ವಿಧಾನಸಭೆಗೆ ತಿಳಿಸಿದರು.ಬಿಜೆಪಿಯ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, `ರಾಜ್ಯದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ಈವರೆಗೆ 305 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. 8ನೇ ತರಗತಿಯಲ್ಲಿ ಕನಿಷ್ಠ 70 ಮಕ್ಕಳು ಇರುವ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಯನ್ನು ಆರಂಭಿಸಲು ಈ ಯೋಜನೆಯಲ್ಲಿ ಅವಕಾಶ ಇದೆ. ಈಗ 300 ಪ್ರೌಢ ಶಾಲೆ ಆರಂಭಿಸಲು ಪ್ರಸ್ತಾವ ಸಲ್ಲಿಸಿದ್ದೇವೆ. 138 ಶಾಲೆಗಳಿಗೆ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ. ಹಿಂದುಳಿದ ತಾಲ್ಲೂಕುಗಳಲ್ಲಿ ಆದ್ಯತೆ ಮೇಲೆ ಈ ಶಾಲೆ ಆರಂಭಿಸಲಾಗುವುದು~ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.