3030 ಉಪನ್ಯಾಸಕರ ಕೊರತೆ

7

3030 ಉಪನ್ಯಾಸಕರ ಕೊರತೆ

Published:
Updated:

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು 3,030 ಉಪನ್ಯಾಸಕ ಹುದ್ದೆಗಳು ಖಾಲಿ ಇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.ವಿಧಾನ ಪರಿಷತ್‌ನಲ್ಲಿ ಪಕ್ಷೇತರ ಸದಸ್ಯ ವೈ.ಎ. ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಶುಕ್ರವಾರ ಲಿಖಿತ ಉತ್ತರ ನೀಡಿರುವ ಅವರು, ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ವಿವಿಧ ಹಂತಗಳಲ್ಲಿ ಭರ್ತಿ ಮಾಡುವುದಾಗಿ ಹೇಳಿದ್ದಾರೆ. ಖಾಲಿ ಇರುವ 3,030 ಉಪನ್ಯಾಸಕ ಹುದ್ದೆಗಳ ಪೈಕಿ 1,765 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಬಹುದು. ಈ ಪೈಕಿ ವಿಜ್ಞಾನ ಮತ್ತು ವಾಣಿಜ್ಯ ಉಪನ್ಯಾಸಕರ 1,009 ಹುದ್ದೆಗಳಿಗೆ ಕೇಂದ್ರೀಕೃತ ದಾಖಲಾತಿ ಘಟಕದ (ಸಿಎಸಿ) ಮೂಲಕ ನೇರ ನೇಮಕಾತಿ ಮಾಡಲು ವಿಶೇಷ ನಿಯಮ ರಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.ನೇರ ನೇಮಕಾತಿಯ ಉಳಿದ ಹುದ್ದೆಗಳನ್ನು ಭರ್ತಿಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಬಡ್ತಿ ಕೋಟಾದ 887 ಉಪನ್ಯಾಸಕರ ಹುದ್ದೆಗಳನ್ನು ಅರ್ಹ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ನೀಡುವುದರ ಮೂಲಕ ತುಂಬಲಾಗುವುದು ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry