ಬುಧವಾರ, ಜನವರಿ 22, 2020
28 °C

31ಕ್ಕೆ ಗ್ರಾ.ಪಂ. ನೌಕರರ ಚಲೋ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಕನಿಷ್ಠ ಕೂಲಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಗ್ರಾಮ ಪಂಚಾಯಿತಿ ನೌಕರರ ಸಂಘವು ಜ.31ರಂದು `ಬೆಂಗಳೂರು ಚಲೋ~ ಪ್ರತಿಭಟನೆ ಹಮ್ಮಿಕೊಂಡಿದೆ.ಹಲವು ವರ್ಷಗಳಿಂದ ದುಡಿಯುತ್ತಿರುವ ಗ್ರಾಮ ಪಂಚಾಯಿತಿ ನೌಕರರಿಗೆ ಈವರೆಗೆ ಕನಿಷ್ಠ ಕೂಲಿ ನಿಗದಿಪಡಿಸಲಾಗಿಲ್ಲ. ಆರ್ಥಿಕ ಮುಗ್ಗಟ್ಟಿನಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ನೌಕರರಿಗೆ ಉದ್ಯೋಗ ಭದ್ರತೆ ಕೂಡ ಇಲ್ಲ. ನೌಕರರ ಸಮಸ್ಯೆಗಳು ಪರಿಹರಿಸುವಂತೆ ಆಗ್ರಹಿಸಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಈ ಎಲ್ಲದರ ಹಿನ್ನೆಲೆಯಲ್ಲಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದೇವೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಾರುತಿ ಮಾನ್ಪಡೆ ತಿಳಿಸಿದ್ದಾರೆ.ನೌಕರರ ವೇತನಕ್ಕಾಗಿ ಪ್ರತ್ಯೇಕ ಅನುದಾನ ಒದಗಿಸಬೇಕು, ಬಿಲ್ ಕಲೆಕ್ಟರ್‌ಗಳ ಪದೋನ್ನತಿ ಮಾಡಬೇಕು ಮತ್ತು ಕಂಪ್ಯೂಟರ್ ಆಪರೇಟರುಗಳ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಬೇಕು ಎಂದು ಒತ್ತಾಯಿಸಲಿದ್ದೇವೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಮುಖಂಡ ಬಿ.ಎನ್.ಮುನಿಕೃಷ್ಣಪ್ಪ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)