ಮಡಿಕೇರಿ: ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ 106ನೇಜನ್ಮ ದಿನಾಚರಣೆಯನ್ನು ಇದೇ 31ರಂದು ಅದ್ದೂರಿಯಾಗಿ ಆಚರಿಸಲು ನಿರ್ಧರಿ ಸಲಾಗಿದೆ ಎಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ವೇದಿಕೆಯ ಪದಾಧಿಕಾರಿಗಳು ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ನಿವೃತ್ತ ಕರ್ನಲ್ ಕಂಡ್ರತಂಡ ಸುಬ್ಬಯ್ಯ, ಸಂಚಾಲಕ ನಿವೃತ್ತ ಮೇಜರ್ ಬಿದ್ದಂಡ ಎ.ನಂಜಪ್ಪ, ಕಾರ್ಯದರ್ಶಿ ಉಳ್ಳಿಯಡ ಎಂ.ಪೂವಯ್ಯ ಈ ಮಾಹಿತಿ ನೀಡಿದರು.

ಪ್ರಸ್ತುತ ಸಾರಿಗೆ ಪ್ರಾಧಿಕಾರದ ಕಚೇರಿಯಾಗಿರುವ ಜನರಲ್ ತಿಮ್ಮಯ್ಯ ಅವರ ನಿವಾಸ ಸನ್ನಿಸೈಡ್ನಲ್ಲೆೀ ಕಾರ್ಯಕ್ರಮವನ್ನು ಆಚರಿಸಲು ತೀರ್ಮಾನಿಸಲಾಗಿದ್ದು, ಒಂದು ವೇಳೆ ಇದಕ್ಕೆ ಅವಕಾಶ ದೊರೆಯದಿದ್ದಲ್ಲಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಅಂದು ಮಧ್ಯಾಹ್ನ 3ಕ್ಕೆ ಸಮಾರಂಭ ನಡೆಸಲಾಗುವುದು ಎಂದು ತಿಳಿಸಿದರು.

ಸ್ಪೀಕರ್ ಕೆ.ಜಿ.ಬೋಪಯ್ಯ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಗೋವಿಂದ ಕಾರಜೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮನು ಬಳಿಗಾರ್, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಗಣೇಶ್ ಕಾರ್ನಿಕ್, ಎಂ.ಸಿ. ನಾಣಯ್ಯ, ಟಿ.ಜಾನ್ ಮತ್ತಿತರ ಜನಪ್ರತಿನಿಧಿಗಳನ್ನು ಆಹ್ವಾನಿಸ ಲಾಗುವುದು ಎಂದು ಅವರು ತಿಳಿಸಿದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮದಿನವನ್ನು ಸಾರ್ವತ್ರಿಕವಾಗಿ ಆಚರಿಸಿದಂತೆ ಜನರಲ್ ತಿಮ್ಮಯ್ಯ ಅವರ ಜನ್ಮದಿನವನ್ನೂ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಜನ್ಮದಿನೋತ್ಸವ ನಿಮಿತ್ತ ಹಲವು ಕೊಡವ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಬೊಳಕಾಟ್, ಕೋಲಾಟ್, ಉಮ್ಮತ್ತಾಟ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಗಳನ್ನು ಏರ್ಪಡಿಸಲಿದ್ದು, ಈ ಸ್ಪರ್ಧೆಗಳು ಅಂದು ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಳ್ಳಲಿವೆ ಎಂದು ಅವರು ತಿಳಿಸಿದರು.

ಪ್ರತಿ ಸ್ಪರ್ಧೆಯಲ್ಲಿ ಪ್ರಥಮ ರೂ.15 ಸಾವಿರ, ದ್ವಿತೀಯ ರೂ.10 ಸಾವಿರ ಹಾಗೂ ತೃತೀಯ ರೂ. 5 ಸಾವಿರ ನಗದು ಬಹುಮಾನ ನೀಡಲಾಗುವುದು. ಆಸಕ್ತ ತಂಡಗಳು ತಮ್ಮ ಹೆಸರು, ವಿಳಾಸ ಮತ್ತು ವಿವರಗಳನ್ನು ಮಾ.20 ರ ಒಳಗೆ ಸಂಚಾಲಕರು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅಂಡ್ ಜನರಲ್ ತಿಮ್ಮಯ್ಯ ಫೋರಂ, ಜನರಲ್ ತಿಮ್ಮಯ್ಯ ಮ್ಯೂಸಿಯಂ ಕಚೇರಿ, ಆರ್.ಟಿ.ಒ ಕಾಂಪ್ಲೆಕ್ಸ್, ಜನರಲ್ ತಿಮ್ಮಯ್ಯ ರಸ್ತೆ, ಮಡಿಕೇರಿ-571 201 (ದೂ: 9448184559) ಈ ವಿಳಾಸಕ್ಕೆ ತಮ್ಮ ಪ್ರವೇಶ ಪತ್ರಗಳನ್ನು ಕಳುಹಿಸುವಂತೆ ಅವರು ಕೋರಿದರು.

ವೇದಿಕೆಯ ಪದಾಧಿಕಾರಿಗಳಾದ ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ಅಲ್ಲಚಂಡ ಗೌತಮ್, ಮಲಚೀರ ಬೋಸ್ ಸುದ್ದಿಗೋಷ್ಠಿಯಲ್ಲಿ ಇದ್ದರು.

`ಸಾರಿಗೆ ಕಚೇರಿ ತೆರವುಗೊಳಿಸಿ~

ಜನರಲ್ ತಿಮ್ಮಯ್ಯ ಅವರು ಜನಿಸಿದ ಸನ್ನಿಸೈಡ್ ನಿವಾಸದಲ್ಲಿ ಸಾರಿಗೆ ಇಲಾಖೆಯ ಕಚೇರಿಯು ಕಾರ್ಯನಿರ್ವಹಿಸುತ್ತಿದ್ದು, ಇದನ್ನು ತೆರವುಗೊಳಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ವೇದಿಕೆಯ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವೇಳೆ ಅಧಿಕಾರಿಗಳು ಕಟ್ಟಡ ತೆರವುಗೊಳಿಸಿ ಸಹಕರಿಸದಿದ್ದಲ್ಲಿ ಜಿಲ್ಲೆಯ ಜನರ ಸಹಭಾಗಿತ್ವದಲ್ಲಿ ಮಾ.25 ರಿಂದ 30 ರವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಆರು ವರ್ಷಗಳ ಹಿಂದೆ ನಗರಕ್ಕೆ ಆಗಮಿಸಿದ್ದ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ಕಟ್ಟಡವನ್ನು ತೆರವುಗೊಳಿಸಲು ಸಾರಿಗೆ ಇಲಾಖೆಯವರಿಗೆ ಸೂಚನೆ ನೀಡಿದ್ದರೂ ಕಾರ್ಯಗತವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕಟ್ಟಡದ ಸುತ್ತಮುತ್ತಲಿನ 18 ಸರ್ಕಾರಿ ವಸತಿಗೃಹಗಳಿದ್ದು, ಅವುಗಳನ್ನು ತೆರವುಗೊಳಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಹಲವು ಬಾರಿ ವ್ಯವಹರಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.