ಗುರುವಾರ , ಜೂನ್ 24, 2021
24 °C

31ರಂದು ಮಹಿಳಾ ಮೋರ್ಚಾ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲು ಪಕ್ಷದ ವಿವಿಧ ಮೋರ್ಚಾಗಳ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಮೊದಲ ಹೆಜ್ಜೆಯಾಗಿ ಮಹಿಳಾ ಮೋರ್ಚಾ ವತಿಯಿಂದ `ನಾರಿ ಶಕ್ತಿ ಸಂಗಮ~ ಸಮಾವೇಶ ಇದೇ 31ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.ಮಹಿಳಾ ಮೋರ್ಚಾ ಸಮಾವೇಶಕ್ಕೆ ಪೂರ್ವಭಾವಿಯಾಗಿ ಶನಿವಾರ ಆಯೋಜಿಸಲಾಗಿದ್ದ ಭೂಮಿ ಪೂಜೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `31ರಂದು ನಡೆಯುವ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೂ ಪಾಲ್ಗೊಳ್ಳಲಿದ್ದಾರೆ.ವಿವಿಧ ಮೋರ್ಚಾಗಳು ಒಂದಾಗಿ ಮೇ 26ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲಿವೆ. ಅದರಲ್ಲಿ ಅಂದಾಜು ಆರು ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ~ ಎಂದು ತಿಳಿಸಿದರು.ಏಪ್ರಿಲ್ 7ರಂದು ಮೈಸೂರಿನಲ್ಲಿ ದಲಿತ ಮೋರ್ಚಾ ವತಿಯಿಂದ ಬೃಹತ್ ಸಮಾವೇಶ ನಡೆಯಲಿದೆ ಎಂದು ಅವರು ಹೇಳಿದರು.`ನಾರಿ ಶಕ್ತಿ ಸಂಗಮ~ ಸಮಾವೇಶದಲ್ಲಿ 30 ಸಾವಿರ ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ರೀನಾ ಪ್ರಕಾಶ್ ತಿಳಿಸಿದರು.

ಇಂಧನ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ತಿನ ಉಪಸಭಾಪತಿ ವಿಮಲಾ ಗೌಡ ಮತ್ತಿತರರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.