ಮಡಿಕೇರಿ: ಜಿಲ್ಲೆಯಲ್ಲಿ ಮುಂಗಾರು ಆರಂಭಗೊಂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮುಂಗಾರು ಹಂಗಾಮಿನಲ್ಲಿ ಬತ್ತ ಹಾಗೂ ಮುಸುಕಿನ ಜೋಳದ ಬೆಳೆಗಳು ಪ್ರಮುಖವಾಗಿದ್ದು, ಜೂನ್ ಎರಡನೇ ವಾರದಿಂದ ಬತ್ತ ಒಟ್ಟಲು ಪಾತಿ (ಸಸಿಮಡಿ) ಮಾಡುವ ಕಾರ್ಯ ಆರಂಭವಾಗಲಿದೆ.

`ಜಿಲ್ಲೆಯಲ್ಲಿ ಸುಮಾರು 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬತ್ತ ಬೆಳೆಯುವ ಗುರಿ ಇದೆ. ರೈತರು ಸಸಿ ಮಡಿ ಮಾಡುವ ಸಂದರ್ಭದಲ್ಲಿ ಬಿತ್ತನೆಗೆ ಮೊದಲು ಬಿತ್ತನೆ ಬೀಜಗಳನ್ನು ಬೀಜೋಪಚಾರ ಮಾಡಿ ಉಪಯೋಗಿಸುವುದು ಸೂಕ್ತವಾಗಿದೆ. ಇದರಿಂದ ಬೆಂಕಿ ರೋಗ ಬರುವುದನ್ನು ನಿಯಂತ್ರಿಸಬಹುದಾಗಿದೆ.

ಪ್ರತಿ ಕೆ.ಜಿ. ಬತ್ತ ಬಿತ್ತನೆ ಬೀಜಕ್ಕೆ 2 ಗ್ರಾಂ. ಬೇವಿಸ್ಟಿನ್ ಶಿಲೀಂದ್ರ ನಾಶಕ ಪುಡಿಯನ್ನು ಬೆರೆಸಿ ಬೀಜೋಪಚಾರ ಮಾಡುವುದು ಸೂಕ್ತವಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಯಾಗಿ ಜೂನ್ 10ರ ನಂತರ ಸಸಿ ಮಡಿಯಲ್ಲಿ ಬತ್ತ ಬಿತ್ತುವ ರೂಢಿಯಿದ್ದು, ಸಸಿ ಮಡಿಗೆ ಭೂಮಿ ಸಿದ್ಧತೆ ಕಾರ್ಯ ನಡೆಯುತ್ತಿದೆ. ಬತ್ತದ ಬೆಳೆಗೆ ಬೆಂಕಿ ರೋಗದ ಬಾಧೆ ಹೆಚ್ಚಾಗಿ ಕಂಡು ಬರುವುದರಿಂದ ರೈತರು ಮುಂಜಾಗ್ರತಾ ಕ್ರಮವಾಗಿ ಬಿತ್ತನೆಗೆ ಮೊದಲು ಕಾರ್ಬನ್ಡೈಜಿಂ ಶಿಲೀಂಧ್ರ ನಾಶಕದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದು ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.

ದೀರ್ಘಾವಧಿ ತಳಿಗಳಾದ ಇಂಟಾನ್, ತುಂಗಾ, ಅತಿರ, ಬಿ.ಆರ್. 2655, ತನು ತಳಿ ಭತ್ತಗಳನ್ನು ಜೂನ್ 10ರಿಂದ 25ರ ಒಳಗೆ ಬಿತ್ತನೆ ಮಾಡಬೇಕು. ಮಧ್ಯಮಾವಧಿ ತಳಿಗಳಾದ ಐ.ಇ.ಟಿ. 7191, ಜಯ, ಎಂ.ಟಿ.ಯು 1001 ತಳಿಗಳನ್ನು ಜೂನ್ 4ನೇ ವಾರದಲ್ಲಿ ಬಿತ್ತನೆ ಮಾಡುವುದು. ಅಲ್ಪಾವಧಿ ತಳಿಗಳಾದ ಐ.ಆರ್. 64, ಹೈಬ್ರಿಡ್ ಬತ್ತಗಳನ್ನು ಜುಲೈ ಮೊದಲನೇ ವಾರದಲ್ಲಿ ಬಿತ್ತನೆಗೆ ಬಳಸುವುದು ಸೂಕ್ತವಾಗಿದೆ ಎಂದು ಹೇಳಿದ್ದಾರೆ.

ಜೋಳ ಬಿತ್ತನೆ: ಜಿಲ್ಲೆಯಲ್ಲಿ ಸುಮಾರು 3,500 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡುವ ಗುರಿಯಿದ್ದು, ಈಗಾಗಲೇ 100 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಜೂನ್ ಅಂತ್ಯದ ವೇಳೆಗೆ ಮುಸುಕಿನ ಜೋಳ ಬಿತ್ತನೆ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.

ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ
ಮಡಿಕೇರಿ: ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಮಂಗಳವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಮಡಿಕೇರಿ ಸೇರಿದಂತೆ ಭಾಗಮಂಡಲ, ನಾಪೋಕ್ಲು, ಪೊನ್ನಂಪೇಟೆ, ವಿರಾಜಪೇಟೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆಯ ಪ್ರಮಾಣ ಕಡಿಮೆಯಾಗಿದೆ.

ಮಡಿಕೇರಿಯಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಬಿಸಿಲಿನ ಛಾಯೆ ಆವರಿಸಿತ್ತು. ಮಧ್ಯಾಹ್ನದ ಸುಮಾರಿಗೆ ಮೋಡ ಕವಿದ ವಾತಾವರಣದೊಂದಿಗೆ ಸ್ವಲ್ಪ ಪ್ರಮಾಣದಲ್ಲಿ ತುಂತುರು ಮಳೆಯಾಯಿತು. ದಿನವಿಡೀ ಮಳೆಯ ಮೋಡಗಳು ದಟ್ಟೈಸ್ದ್ದಿದರೂ ಬಿಸಿಲಿನ ವಾತಾವರಣ ಕಂಡು ಬಂದಿತು.

ಸುಂಟಿಕೊಪ್ಪ, ಶಾಂತಳ್ಳಿ, ನಾಪೋಕ್ಲು, ಸಂಪಾಜೆ, ಭಾಗಮಂಡಲ, ಕಸಬಾ, ಹುದಿಕೇರಿ, ಪೊನ್ನಂಪೇಟೆ, ಅಮ್ಮತ್ತಿ, ಬಾಳಲೆ ಸೇರಿದಂತೆ ಮತ್ತಿತರರ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ.

ಮಳೆಯ ವಿವರ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ 8.30ಕ್ಕೆ ಅಂತ್ಯಗೊಂಡಂತೆ 24 ಗಂಟೆಯ ಅವಧಿಯಲ್ಲಿ 3.49 ಮಿ.ಮೀ. ಸರಾಸರಿ ಮಳೆ ದಾಖಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ 225.51 ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 188.30 ಮಿ.ಮೀ ಮಳೆ ದಾಖಲಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ 5.90 ಮಿ.ಮೀ. ಸರಾಸರಿ ಮಳೆ ಬಿದ್ದಿದೆ. ಜನವರಿಯಿಂದ ಇಲ್ಲಿಯವರೆಗೆ 309.19 ಮಿ.ಮೀ. ಮಳೆಯಾಗಿದೆ.
ವೀರಾಜಪೇಟೆ ತಾಲ್ಲೂಕಿನಲ್ಲಿ 3.30 ಮಿ.ಮೀ. ಸರಾಸರಿ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 145.94 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 1.27ಮಿ.ಮೀ. ಸರಾಸರಿ ಮಳೆ. ಜನವರಿಯಿಂದ ಇಲ್ಲಿಯವರೆಗೆ 221.44 ಮಿ.ಮೀ. ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಮಡಿಕೇರಿ ಕಸಬಾ 4.80 ಮಿ.ಮೀ., ನಾಪೋಕ್ಲು 5.80 ಮಿ.ಮೀ., ಸಂಪಾಜೆ 5.40 ಮಿ.ಮೀ., ಭಾಗಮಂಡಲ 7.60 ಮಿ.ಮೀ., ವೀರಾಜಪೇಟೆ ಕಸಬಾ 5.80 ಮಿ.ಮೀ., ಹುದಿಕೇರಿ 1.80 ಮಿ.ಮೀ., ಪೊನ್ನಂಪೇಟೆ 2.20 ಮಿ.ಮೀ., ಅಮ್ಮತ್ತಿ 5 ಮಿ.ಮೀ., ಬಾಳಲೆ 5 ಮಿ.ಮೀ., ಶಾಂತಳ್ಳಿ 3.20 ಮಿ.ಮೀ. ಮಳೆಯಾಗಿದೆ.

ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ
ಮೈಸೂರು: ಕೊಡಗು ಜಿಲ್ಲೆಯಲ್ಲಿ ಜೂನ್ 5ರಿಂದ 7ರವರೆಗೆ ಮೋಡ ಕವಿದ ವಾತಾವರಣವಿದ್ದು, ಗುಡುಗು ಮಿಂಚು ಸಹಿತ ಸಾಧಾರಣದಿಂದ ಭಾರಿ ಮಳೆ ಬರುವ ಸಾಧ್ಯತೆ ಇದೆ ಎಂದು ಮಂಡ್ಯ ಜಿಲ್ಲೆಯ ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರ ತಿಳಿಸಿದೆ.

ಗರಿಷ್ಠ ಉಷ್ಣಾಂಶ 20-21ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 16 ರಿಂದ 17 ಡಿಗ್ರಿ ಸೆಲ್ಸಿಯಸ್ವರೆಗೆ ದಾಖಲಾಗುವ ಸಾಧ್ಯತೆಯಿದೆ.

ಕೃಷಿ ಮಾಹಿತಿ: ಮಳೆಯ ಸದುಪಯೋಗ ಪಡೆದು, ಮುಂಗಾರು ಬೆಳೆಗಳಾದ ಹೆಸರು, ಗೋವಿನ ಜೋಳ, ಬಿ.ಟಿ. ಹತ್ತಿ, ತೊಗರಿ, ಎಳ್ಳು ಹಾಗೂ ಶೇಂಗಾ (ಗೆಜ್ಜೆ) ಬಿತ್ತನೆಯನ್ನು ಮಾಡಬೇಕು.

ಸಾಕಷ್ಟು ಮಳೆ ಬಂದಿರುವ ಪ್ರದೇಶಗಳಲ್ಲಿ ಜಮೀನನ್ನು ರೈತರು ಇಳಿಜಾರಿಗೆ ಅಡ್ಡಲಾಗಿ ಉಳುಮೆ ಮಾಡಿ, ಬಿತ್ತನೆಗೆ ಸೂಕ್ತ ರೀತಿಯಲ್ಲಿ ತಯಾರಿಸಿಕೊಳ್ಳಬೇಕು. ಬಿತ್ತನೆ ಮಾಡುವಾಗ ಏಕದಳ ಧಾನ್ಯದ ಬೀಜಗಳಿಗೆ ಅಝೋಸ್ಪಿರಿಲಮ್ ಮತ್ತು ಪಿಎಸ್ಬಿ ಹಾಗೂ ದ್ವಿದಳ ಧಾನ್ಯದ ಬೀಜಗಳಿಗೆ ರೈಝೋಬಿಯಮ್ ಮತ್ತು ಪಿಎಸ್ಬಿಯಿಂದ ಉಪಚಾರ ಮಾಡಿ ಬಿತ್ತಬೇಕು.

ಬಿತ್ತುವ ಮುನ್ನ ಎಲ್ಲ ಬೆಳೆಗಳ ಬೀಜಗಳಿಗೆ ಕ್ಯಾಪ್ಟಾನ್ ಅಥವಾ ಥೈರಾಮ್ ಅಥವಾ ಕಾರ್ಬನ್ಡೈಜಿಮ್ ಪುಡಿಯನ್ನು ಪ್ರತಿ ಕಿ.ಗ್ರಾಂ. ಬೀಜಕ್ಕೆ 2 ಗ್ರಾಂ ನಂತೆ ಅಥವಾ ಟ್ರೈಕೊಡರ್ಮಾ 4 ಗ್ರಾಂ ನಂತೆ ಉಪಚರಿಸಿ ಬಿತ್ತುವುದರಿಂದ ಬೆಳೆಗಳಿಗೆ ಮುಂದೆ ತಗುಲಬಹುದಾದ ರೋಗಗಳನ್ನು ತಡೆಗಟ್ಟಬಹುದು.

ಈ ಸಂಶೋಧನಾ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ಹಾಗೂ ಅಧಿಕ ಇಳುವರಿ ಕೊಡಬಲ್ಲ ಭಾಗ್ಯ ತಳಿಯ ನುಗ್ಗೆ, ಪ್ರಭಾತ್ ತಳಿಯ ಪಪ್ಪಾಯ ಮತ್ತು ಅಗಸೆ ಸಸಿಗಳು ಮಾರಾಟಕ್ಕೆ ದೊರೆಯುತ್ತವೆ. ಆದ್ದರಿಂದ ಆಸಕ್ತಿಯುಳ್ಳ ರೈತರು ದೂರವಾಣಿ: 80952 27713/ 0821-2591267, 99166 20803 ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.