ಗುರುವಾರ , ಮೇ 26, 2022
30 °C

370ನೇ ವಿಧಿ ರದ್ದು: ರಾಷ್ಟ್ರಪತಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವಂತೆ ಕಾಶ್ಮೀರಿ ಪಂಡಿತರ ನಿಯೋಗ ಶುಕ್ರವಾರ ರಾಷ್ಟ್ರಪತಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.ಜಮ್ಮು-ಕಾಶ್ಮೀರಕ್ಕೆ ನೀಡುತ್ತಿರುವ ವಿಶೇಷ ಸ್ಥಾನಮಾನವನ್ನು  ರದ್ದು ಮಾಡುವಂತೆ ಕೋರಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂಧಾನಕಾರರು ಸಿದ್ಧಪಡಿಸಿದ ವರದಿಯನ್ನು ಕಾಶ್ಮೀರಿ ಪಂಡಿತರು ಟೀಕಿಸಿದ್ದಾರೆ.ಸಂಧಾನಕಾರರು ನೀಡಿರುವ ವರದಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಯಾವುದೇ ರೀತಿಯ ಮಹತ್ವವನ್ನು ನೀಡಿಲ್ಲ ಎಂದು ರಾಷ್ಟ್ರಪತಿ ಅವರಿಗೆ ನೀಡಿರುವ ಮನವಿಯಲ್ಲಿ ತಿಳಿಸಿರುವ ನಿಯೋಗ, ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.