ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

371 ಜೆ: ನಾಡಿದ್ದು ನಿಯಮಾವಳಿ ಅಂತಿಮ

Last Updated 13 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಕೇಂದ್ರ ಸರ್ಕಾರದ ತೀರ್ಮಾನ ಜಾರಿಗೆ ಸಂಬಂಧಿಸಿದ ನಿಯಮಗಳನ್ನು ರೂಪಿಸಲು ರಚಿಸಿರುವ ಸಂಪುಟ ಉಪ ಸಮಿತಿ ಮಂಗಳವಾರ ತನ್ನ ವರದಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ನಿಯಮ ಸಿದ್ಧಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಅವರ ನೇತೃತ್ವದ ಸಂಪುಟ ಉಪ ಸಮಿತಿ ಶುಕ್ರವಾರ ಸಂಜೆ ಸಭೆ ಸೇರಿತ್ತು.

ಹೈದರಾಬಾದ್ ಕರ್ನಾಟಕದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ, ಅಭಿವೃದ್ಧಿ ಮಂಡಳಿಯ ಮೂಲಕ ಕೈಗೆತ್ತಿಕೊಳ್ಳುವ ಯೋಜನೆಗಳ ಅನುಷ್ಠಾನ ಮತ್ತಿತರ ಸಂದರ್ಭಗಳಲ್ಲಿ ಅನುಸರಿಸಬೇಕಾದ ನೀತಿ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಜುಲೈ 10ರೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಲು ಸಮಿತಿ ನಿರ್ಧರಿಸಿತ್ತು. ಆದರೆ, ಇನ್ನೂ ಕೆಲ ವಿಷಯಗಳ ಕುರಿತು ಚರ್ಚೆ ಪೂರ್ಣಗೊಂಡಿಲ್ಲ. ಈ ಕಾರಣದಿಂದ ಮಂಗಳವಾರ ಮತ್ತೊಂದು ಸಭೆ ನಡೆಸಿ ನಿಯಮಗಳನ್ನು ರೂಪಿಸುವ ಕೆಲಸವನ್ನು ಅಂತಿಮಗೊಳಿಸಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT