ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

371ನೇ ಕಲಂ ತಿದ್ದುಪಡಿ ಒಪ್ಪಿಗೆ: ಸ್ವಾಗತ

Last Updated 8 ಆಗಸ್ಟ್ 2012, 8:00 IST
ಅಕ್ಷರ ಗಾತ್ರ

ರಾಯಚೂರು: ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸಂವಿಧಾನದ 371ನೇ ಕಲಂ ತಿದ್ದುಪಡಿಗೆ  ಸಚಿವ ಸಂಪುಟದ ರಾಜಕೀಯ ವ್ಯವಹಾರಗಳ ಉಪ ಸಮಿತಿ ಒಪ್ಪಿಗೆ ನಿರ್ಣಯ ಸ್ವಾಗತಾರ್ಹವಾಗಿದೆ ಎಂದು ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಉಮರ್ ಫಾರೂಖ್ ಎಂದು ಹೇಳಿದ್ದಾರೆ.

ಹಲವು ದಶಕಗಳಿಂದ ಹೈದರಾಬಾದ್ ಕರ್ನಾಟಕ ಪ್ರದೇಶದ ಜನರು ಸಂವಿಧಾನದ 371 ನೇ ಕಲಂ ತಿದ್ದುಪಡಿಗೆ ಹೋರಾಟ ನಡೆಸಿದ್ದರು. ಈ ನಿರ್ಣಯದಿಂದ  ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ  ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಎಆಯ್‌ಡಿವೈಒ ಸಂಘಟನೆಯಿಂದ ಪ್ರತಿಭಟನೆಪ್ರಾಥಮಿ ಶಾಲೆಗಳಲ್ಲಿರುವ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಬೇಕು ಒತ್ತಾಯಿಸಿ ಇದೇ 8ರಂದು ಬೆಳಿಗ್ಗೆ 11.15ಕ್ಕೆ ಎಐಡಿವೈಒ ಸಂಘಟನೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ನೇಮಕಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಶಿಕ್ಷಣ ಖಾತೆ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಎಐಡಿವೈಒ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚನ್ನಬಸವ ಜಾನೇಕಲ್, ಶಾಲಾ ಶಿಕ್ಷಕರ ನೇಮಕಾತಿ ಹೋರಾಟ ಸಮಿತಿ ಸಹ ಸಂಚಾಲಕ ಗಂಗಾಧರ, ಸದಸ್ಯ ಸದ್ದಾಂ ಹುಸೇನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

`ನಿರಂತರ ಜ್ಯೋತಿ ಯೋಜನೆ ಶೀಘ್ರ ಜಾರಿ~
ರಾಯಚೂರು:
ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ನಿರಂತರ ಜ್ಯೋತಿ ಯೋಜನೆ ಅನುಷ್ಟಾನಕ್ಕಾಗಿ ಸರ್ಕಾರ ಹಾಗೂ  ಗುಲ್ಬರ್ಗ ವಿದ್ಯುತ್ ಸರಬರಾಜು  ನಿಗಮಕ್ಕೆ ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಗಮವು ಸ್ಪಂದಿಸಿದ ಕೂಡಲೇ ಚಾಲನೆ ನೀಡಲಾಗುವುದು ಎಂದು ಜೆಸ್ಕಾಂ ಮುಖ್ಯ ಎಂಜಿನಿಯರ್ ಅವರು ತಿಳಿಸಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಉಮಾದೇವಿ ಹುಲಿರಾಜ್ ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡುವುದಾಗಿ ತಿಳಿಸಲಾಗಿದೆ. ಈ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್ ಪೂರೈಕೆಯಾಗಲಿದೆ. ಬಹುದಿನ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷಕ್ಕೆ ಯುವಕರ ಸೇರ್ಪಡೆ

ರಾಯಚೂರು: ನಗರದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಈಚೆಗೆ ನಡೆದ ನೂತನ ಜಿಲ್ಲಾಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು, ಜಿಲ್ಲಾ ಕಾರ್ಯಾಧ್ಯಕ್ಷ ಯೂಸೂಫ್ ಖಾನ್ ಹಾಗೂ ಯುವ ಘಟಕದ ಜಿಲ್ಲಾಧ್ಯಕ್ಷ ಎಂ.ಪವನಕುಮಾರ ಅವರ ಸನ್ಮಾನ ಕಾರ್ಯಕ್ರಮದಲ್ಲಿ ವಾರ್ಡ್  ನಂಬರ್ 27ರ ಕೆಲ ಯುವಕರು ವೈ.ಎನ್. ವೀರೇಂದ್ರ ಪ್ರಕಾಶ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನರಸಿಂಹ ನಾಯಕ, ಕೆ.ವಿನೋದ, ಕೆ.ಸುರೇಶ, ಎಂ.ವೀರೇಶ, ಗೋಪಾಲ ನಾಯಕ, ಅಂಜಿನಾಯಕ, ವೈ.ಜನಾರ್ದನರೆಡ್ಡಿ, ಎಂ.ಸುರೇಶರೆಡ್ಡಿ, ಮುಂಗ್ಲಿ ನಾಗರೆಡ್ಡಿ, ಬೋಳರೆಡ್ಡಿ, ಗಣಮೂರು ವನರೆಡ್ಡಿ, ಕೆ.ಮೌನೇಶ, ಬಿ.ಮಹೇಶಕುಮಾರ ಎಂ.ನವೀನರೆಡ್ಡಿ, ಡಿ.ವೀರೇಶರೆಡ್ಡಿ, ಶ್ರೀಕಾಂತ, ವೀರೇಶ ಎಂ ಅವರ ಜೆಡಿಎಸ್ ಪಕ್ಷ ಸೇರ್ಪಡೆಗೊಂಡೆಗೊಂಡರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT