ಭಾನುವಾರ, ಮೇ 22, 2022
24 °C

`38.3ಸಾವಿರ ಕ್ವಿಂಟಲ್ ಬೀಜ ಬೇಡಿಕೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ:  ಯಾದಗಿರಿ ಮತ್ತು ಗುಲ್ಬರ್ಗಜಿಲ್ಲೆಯಲ್ಲಿ ಪ್ರಾರಂಭವಾಗಿರುವ 2013ನೇ ಸಾಲಿನ ಮುಂಗಾರು ಹಂಗಾಮಿಗೆ ಬೀಜ ಬದಲಿಕೆ ಆಧಾರದ ಮೇರೆಗೆ ಕ್ರಮವಾಗಿ ಒಟ್ಟು 38,331 ಕ್ವಿಂಟಲ್ ಹಾಗೂ 31,446 ಕ್ವಿಂಟಲ್ ಬಿತ್ತನೆ ಬೀಜ ಬೇಡಿಕೆ ಇದೆ ಎಂದು ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್‌ನಲ್ಲಿ ಮಂಗಳವಾರ ತಿಳಿಸಿದರು.ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ ಅವರು ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಪ್ರಾರಂಭವಾಗಿರುವ ಮುಂಗಾರು ಹಂಗಾಮು ಬಿತ್ತನೆಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪ್ರಮಾಣ ಎಷ್ಟು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದರು.2013ನೇ ಸಾಲಿನ ಮುಂಗಾರು ಹಂಗಾಮಿಗೆ ಈ ಎರಡು ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರಗಳ ಬೇಡಿಕೆಯು ಕ್ರಮವಾಗಿ ಒಟ್ಟು 1,12,800 ಟನ್ ಮತ್ತು 65,500ಟನ್ ಆಗಿದೆ ಎಂದರು.ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಯ ರೈತರು ರಸಗೊಬ್ಬರಗಳ ಲಭ್ಯತೆ ಬಗ್ಗೆ ಯಾವುದೇ ರೀತಿಯ ಕೊರತೆಯನ್ನು ಎದುರಿಸುವ ಕುರಿತು ವರದಿಯಾಗಿಲ್ಲ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.