ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3957 ಮಂದಿ ನಾಮಪತ್ರ

Last Updated 18 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾ ಚುನಾ ವಣೆಗೆ ಒಟ್ಟು 3,957 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಗುರುವಾರ ನಾಮಪತ್ರಗಳ ಪರಿಶೀಲನೆ ನಡೆ ಯಿತು. ನಾಮಪತ್ರ ವಾಪಸ್ ಪಡೆಯಲು ಶನಿವಾರ ಕೊನೆಯ ದಿನ. ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಅಂದು ದೊರೆಯಲಿದೆ.

ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 32ಕ್ಕಿಂತ ಹೆಚ್ಚು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೆಜಿಎಫ್‌ನಲ್ಲಿ ಅತಿಹೆಚ್ಚು ಅಂದರೆ 42 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಗುಲ್ಬರ್ಗ ದಕ್ಷಿಣ- 41, ಮುಳ ಬಾಗಲು- 41, ಬಳ್ಳಾರಿ ನಗರ- 40, ಮಾಯಕೊಂಡ- 38, ಹುಬ್ಬಳ್ಳಿ - ಧಾರವಾಡ ಸೆಂಟ್ರಲ್- 37, ಬಾಗೇಪಲ್ಲಿ- 34,  ಕೆ.ಆರ್.ಪುರ ಕ್ಷೇತ್ರದಲ್ಲಿ 33 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. 23 ವಿಧಾನ ಸಭಾ ಕ್ಷೇತ್ರಗಳಲ್ಲಿ 16ಕ್ಕಿಂತ ಹೆಚ್ಚು ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದರು. 

ದೇವದುರ್ಗ ಕ್ಷೇತ್ರದಲ್ಲಿ ಆರು ಹಾಗೂ ಪುತ್ತೂರು ಕ್ಷೇತ್ರದಲ್ಲಿ ಏಳು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕಲಘಟಗಿ, ಬೀದರ್ ದಕ್ಷಿಣ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ನಾಮಪತ್ರಗಳ ಪರಿಶೀಲನೆ ಗುರುವಾರ ನಡೆದಿಲ್ಲ. ಕೆಲವು ಮಾಹಿತಿಗಳನ್ನು ನೀಡಲು ಅಭ್ಯರ್ಥಿಗಳು ಕಾಲಾವಕಾಶ ಕೇಳಿದ್ದಾರೆ. ಅಂತಹ ಕ್ಷೇತ್ರಗಳಲ್ಲಿ ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ದೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 809 ದೂರುಗಳು ದಾಖಲಾಗಿದ್ದು, 528 ವಿಲೇವಾರಿ ಆಗಿವೆ ಎಂದರು.ಧಾರ್ಮಿಕ ಕಾರ್ಯಕ್ರಮಗಳಿಗೆ ಚುನಾವಣಾ ನೀತಿ ಸಂಹಿತೆ ಅನ್ವಯವಾಗುವುದಿಲ್ಲ. ಬೆಂಗಳೂರು ಬಾಂಬ್‌ಸ್ಫೋಟ ಘಟನೆಯಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡುವುದಕ್ಕೂ ಅಡ್ಡಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮತದಾರರ ಸಂಖ್ಯೆ ಹೆಚ್ಚಳ: ಮತದಾರರ ಪಟ್ಟಿಗೆ ಹೊಸದಾಗಿ 20,62,283 ಹೆಸರುಗಳನ್ನು ಸೇರಿಸಲಾಗಿದೆ. ಇದರಿಂದಾಗಿ ರಾಜ್ಯದಲ್ಲಿನ ಮತದಾರರ ಒಟ್ಟು ಸಂಖ್ಯೆ 4.36 ಕೋಟಿಗೆ ಏರಿದೆ.

ನಗದು ವಶ: ವರ್ತೂರಿನಲ್ಲಿ ಬುಧವಾರ ರೂ 25 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಸವದತ್ತಿಯಲ್ಲಿ ರೂ 8.38 ಲಕ್ಷ ವಶಪಡಿಸಿಕೊಂಡು ಒಬ್ಬರನ್ನು ಬಂಧಿಸಲಾಗಿದೆ. ಈ ಎರಡೂ ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ ಎಂದರು.

ತಿಪಟೂರಿನಲ್ಲಿರೂ5 ಲಕ್ಷ, ಹಿರಿಯೂರು ಬಳಿ ರೂ 60 ಲಕ್ಷ, ಗದಗ ಜಿಲ್ಲೆಯ ಡಂಬಳದಲ್ಲಿ ರೂ 4.55 ಲಕ್ಷ, ರಾಯಚೂರಿನಲ್ಲಿ ರೂ 5 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಗುರುವಾರ ರಾಯಚೂರಿನಲ್ಲಿರೂ2.5 ಲಕ್ಷ, ಗೋಕಾಕದಲ್ಲಿ ರೂ 11 ಲಕ್ಷ, ನವಲಗುಂದದಲ್ಲಿ ರೂ 6.95 ಲಕ್ಷ, ಹೆಜ್ಜಾಲದಲ್ಲಿ ರೂ 4 ಲಕ್ಷ ಹಾಗೂ ಬೆಂಗಳೂರಿನ ಗಾಂಧಿನಗರದಲ್ಲಿ ರೂ 2.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಗುಲ್ಬರ್ಗದಲ್ಲಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ತನಿಖೆ: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕೆ.ಜ್ಯೋತಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ, ಕೆಜೆಪಿ ಅಭ್ಯರ್ಥಿ ಕೆ.ಆರ್. ವೆಂಕಟೇಶಗೌಡ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರ ಉಮೇದುವಾರಿಕೆಯನ್ನು ರದ್ದುಪಡಿಸಲು ನಿಯಮಗಳಡಿ ಅವಕಾಶ ಇಲ್ಲ  ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT