ಶನಿವಾರ, ಜೂನ್ 12, 2021
28 °C

4, 5ನೆ ಹಂತದ ಚುನಾವಣೆಗೆ ಅಧಿಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಹದಿನಾರು ರಾಜ್ಯ­ಗಳ 125 ಕ್ಷೇತ್ರಗಳಿಗೆ ಏಪ್ರಿಲ್‌ 12 ಮತ್ತು 17ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಬುಧವಾರ ಅಧಿಸೂಚನೆ ಹೊರಡಿಸಿದೆ.

ನಾಲ್ಕನೇ ಹಂತದ ಚುನಾವಣೆಯು ನಾಲ್ಕು ರಾಜ್ಯಗಳ ಏಳು ಕ್ಷೇತ್ರಗಳಲ್ಲಿ ಏಪ್ರಿಲ್‌ 12ರಂದು ನಡೆಯಲಿದ್ದು, ಕರ್ನಾಟಕ ಸೇರಿದಂತೆ ಇತರ 12 ರಾಜ್ಯಗಳ 121 ಕ್ಷೇತ್ರಗಳಲ್ಲಿ ಐದನೇ ಹಂತದಲ್ಲಿ ಏಪ್ರಿಲ್‌ 17ರಂದು ಮತದಾನ ನಡೆಯಲಿದೆ.ಈ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಮಾರ್ಚ್‌ 26 ಕೊನೆಯ ದಿನ. ನಾಮಪತ್ರಗಳ ಪರಿಶೀಲನೆ ಮರು ದಿನ ನಡೆಯಲಿದೆ. ಉಮೇದುವಾರಿಕೆ ವಾಪಸ್‌ಗೆ 29 ಕಡೇ ದಿನ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.