ಬುಧವಾರ, ನವೆಂಬರ್ 20, 2019
20 °C

4.8 ಕೋಟಿ ವೆಚ್ಚದ ಚರಂಡಿ ಕಾಮಗಾರಿಗೆ ಚಾಲನೆ

Published:
Updated:

ಕೊಪ್ಪಳ: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 63ರ ರಸ್ತೆ ವಿಸ್ತರಣೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ರಸ್ತೆಯ ಇಕ್ಕೆಲಗಳಲ್ಲಿ 4.8 ಕೋಟಿ ರೂಪಾಯಿ ವೆಚ್ಚದಲ್ಲಿ ಚರಂಡಿ ನಿರ್ಮಿಸುವ ಕಾಮಗಾರಿಗೆ ಈಚೆಗೆ ಬಸವೇಶ್ವರ ವೃತ್ತದ ಬಳಿ ಸಂಸದ ಶಿವರಾಮಗೌಡ ಈಚೆಗೆ ಚಾಲನೆ ನೀಡಿದರು.ನಗರ ವಾಸಿಗಳ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರೀಯ ಹೆದ್ದಾರಿ 63ರ ವಿಸ್ತರಣೆ ಈಗಾಗಲೇ ಪೂರ್ಣಗೊಂಡಿದ್ದು, ರಸ್ತೆ ಅಭಿವೃದ್ಧಿ ಕಾರ್ಯ ಪ್ರಾರಂಭವಾಗಬೇಕಾಗಿದೆ. ಇದಕ್ಕೂ ಮುನ್ನ ರಸ್ತೆಯ

ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ ಕಾರ್ಯವಾಗಬೇಕಾಗಿದೆ. 4.82 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಚರಂಡಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು 3 ತಿಂಗಳ ಕಾಲಮಿತಿಯನ್ನು ಯೋಜನೆಯ ಹೊಣೆ ಹೊತ್ತಿರುವ ನಿರ್ಮಿತಿ ಕೇಂದ್ರಕ್ಕೆ  ಹಾಕಿಕೊಡಲಾಗಿದೆ. ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಉಪಾಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)