ಶನಿವಾರ, ಜನವರಿ 18, 2020
19 °C

5ರಿಂದ ರಾಜ್ಯ ರ‌್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆಯು, ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ಸಹಯೋಗದಲ್ಲಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಜೂನ್ 5ರಿಂದ 9ರವರೆಗೆ `ಲೀ-ನಿಂಗ್ ಫೈವ್ ಸ್ಟಾರ್ ರಾಜ್ಯ ರ‌್ಯಾಂಕಿಂಗ್' ಬ್ಯಾಡ್ಮಿಂಟನ್ ಟೂರ್ನಿಯನ್ನು ಆಯೋಜಿಸಿದೆ.ಟೂರ್ನಿಯು 13 ವರ್ಷ, 15 ವರ್ಷ, 17 ವರ್ಷ ಹಾಗೂ 19 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ನಡೆಯಲಿದೆ ಎಂದು ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ಗೌರವಾಧ್ಯಕ್ಷ ಎಂ.ಶಿವಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಸಿಂಗಲ್ಸ್  ಮತ್ತು ಡಬಲ್ಸ್ ವಿಭಾಗದಲ್ಲಿ 500ಕ್ಕೂ ಹೆಚ್ಚು ಪ್ರವೇಶಗಳು ಬಂದಿದ್ದು, ರಾಜ್ಯದ ವಿವಿಧ ಕಡೆಗಳಿಂದ 300-350 ಆಟಗಾರರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಟೂರ್ನಿಯು ರೂ 1 ಲಕ್ಷ ನಗದು ಬಹುಮಾನ ಹೊಂದಿದೆ ಎಂದು ಹೇಳಿದರು.ಆಸಕ್ತರು, ಮಾಹಿತಿಗೆ ಮೊಬೈಲ್: 94480 13078 (ಶಿವಕುಮಾರ್) ಸಂಪರ್ಕಿಸಬಹುದು.

ಪ್ರತಿಕ್ರಿಯಿಸಿ (+)