ಬೆಳಗಾವಿ: ‘ಪ್ರತಿ ಟನ್ ಕಬ್ಬಿಗೆ ಸರ್ಕಾರ ನಿಗದಿಪಡಿಸಿರುವ ದರವನ್ನು ರೈತರಿಗೆ ನೀಡಲೇಬೇಕು. ಈ ಕುರಿತು ಮತ್ತೊಮ್ಮೆ ಚರ್ಚಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯನ್ನು ಮೇ 5 ರಂದು ಬೆಂಗಳೂರಿನಲ್ಲಿ ಕರೆಯಲಾಗಿದೆ’ ಎಂದು ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ ತಿಳಿಸಿದರು.

ಶನಿವಾರ ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಭೆಗೆ ಎಲ್ಲ ಕಾರ್ಖಾನೆಗಳ ಮಾಲೀಕರು ಬರಲಿದ್ದಾರೆ. ಸರ್ಕಾರದ ಪರವಾಗಿ ನಾನು, ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಕಾನೂನು ಸಚಿವರು ಭಾಗವಹಿಸುತ್ತೇವೆ. ಸಭೆಯ ನಿರ್ಣಯವನ್ನು ಮುಖ್ಯಮಂತ್ರಿಗಳಿಗೆ ತಿಳಿಸಲಾಗುವುದು. ಮುಂದಿನ ಕ್ರಮವನ್ನು ಮುಖ್ಯಮಂತ್ರಿಗಳು ಕೈಗೊಳ್ಳಲಿದ್ದಾರೆ’ ಎಂದರು.

ಕೃಷ್ಣಾ ನದಿಗೆ ನೀರು: ಕೃಷ್ಣಾ ನದಿಗೆ ನೀರು ಬಿಡುವಂತೆ ಈಗಾಗಲೇ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಾಗಿದೆ. ಜಲಸಂಪನ್ಮೂಲ ಸಚಿವರು ಸಹ ಪ್ರಯತ್ನ ಮುಂದುವರಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವಾಸ್ತವ ವರದಿಯನ್ನು ಅಧಿಕಾರಿಗಳಿಂದ ಪಡೆದು ಮಹಾರಾಷ್ಟ್ರಕ್ಕೆ ನಿಯೋಗ ತೆರಳಲಿದೆ. ಕೋಯ್ನಾ ಮತ್ತು ಕಾಳಮ್ಮವಾಡಿ ಜಲಾಶಯಗಳಿಂದ ನೀರು ಬಿಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.